ದರ್ಶನಾಪುರ್ ಗೆ ಶಿರವಾಳ ತಿರುಗೇಟು

ಶಹಾಪೂರ:ತಾಲೂಕಿನ ನಗರಸಭೆಯ ಆವರಣದಲ್ಲಿ ಆಶ್ರಯ ಮನೆಗಳ ಆಯ್ಕೆಯು ರದ್ದಾದ ಪ್ರಯುಕ್ತ ಶಾಸಕರು ಹತಾಶರಾಗಿ ಏನೇನೊ ಮಾತನಾಡುತ್ತಿದ್ದಾರೆ. ಕಳೆದ ವರ್ಷ ರಾಜ್ಯಸಭೆಯ ಚುನಾವಣೆಯಲ್ಲಿ ಮತದಾನ ಮಾಡುವ ಸಂದರ್ಭದಲ್ಲಿ ಹಣ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿರುವುದು ಶುದ್ಧ ಸುಳ್ಳು ಎಂದು ಮಾಜಿ ಶಾಸಕರಾದ ಗುರು ಪಾಟೀಲ ಶಿರವಾಳ ಶಾಸಕರಿಗೆ ತಿರುಗೇಟು ನೀಡಿದ್ದಾರೆ.

 

ಕಳೆದು ಬಾರಿ ನಾನು ಕೆಜೆಪಿ ಪಕ್ಷದಿಂದ ಶಾಸಕನಾಗಿದ್ದು, ರಾಜ್ಯಸಭೆ ಅಭ್ಯರ್ಥಿಯ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಯಾವ ಅಭ್ಯರ್ಥಿಗಾದರೂ ನಾನು ಮತದಾನ ಮಾಡಬಹುದು.ಆ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಗೆ ಬೇಕಾದ ಮತಗಳಿದ್ದವು. ಹೆಚ್ಚುವರಿಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಣದಲ್ಲಿದ್ದ ಪರಿಣಾಮ ಆಗಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನನ್ನನ್ನು ಪಿ. ರಾಜೀವ್ ಮತ್ತು ಪುಟ್ಟಣ್ಣಯ್ಯ ಮೂರು ಜನರನ್ನು ಕರೆದು ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವುದಾಗಿ ಭರವಸೆ ನೀಡಿದ ಪ್ರಯುಕ್ತ,ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿದ್ದೇನೆ ಹೊರತು ಯಾವುದೇ ಹಣದ ಆಮಿಷಕ್ಕೆ ಒಳಗಾಗಿಲ್ಲ ಎಂದು ಸ್ಪಷ್ಟೀಕರಣ ನೀಡಿದರು.

ಪ್ರಸ್ತುತ ಶಾಸಕರು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಇಕ್ಬಾಲ್ ಅಹಮದ್ ಸರಡಗಿಯವರನ್ನು ಸೋಲಿಸಿ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿರುವದು ಯಾರು ಎನ್ನುವುದನ್ನು ಅವರು ಮನವರಿಕೆ ಮಾಡಿಕೊಳ್ಳಬೇಕು.ಕಾಂಗ್ರೆಸ್ ಪಕ್ಷದ ಶಾಸಕರಾದ ತಾವು ಆ ಸಂದರ್ಭದಲ್ಲಿ ಎಷ್ಟು ಹಣ ತೆಗೆದುಕೊಂಡರು ಎನ್ನುವ ಬಗ್ಗೆ ಬಹಿರಂಗಪಡಿಸಬೇಕು ಮತ್ತು ಯಾವ ನೈತಿಕತೆ ಬಗ್ಗೆ ಮಾತನಾಡುತ್ತಿರುವುದು ಗೊತ್ತಾಗುತ್ತಿಲ್ಲ. ಇದರ ಬಗ್ಗೆ ಸ್ಪಷ್ಟೀಕರಣ ಕೊಡಬೇಕು ಎಂದು ಆಗ್ರಹಿಸಿದರು.

About The Author