ಸೆಪ್ಟೆಂಬರ್ 14: ಯತ್ನಾಳ ಶಹಾಪುರಕ್ಕೆ

ಶಹಾಪೂರ: ಬಿಜೆಪಿಯ ಹಿರಿಯ ಮುಖಂಡ ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷರಾದ ಆಂದೋಲದ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ಸೆಪ್ಟೆಂಬರ್ 14 ರಂದು ಮದ್ಯಾಹ್ನ 2.30 ಗಂಟೆಗೆ ಶಹಾಪುರ ನಗರಕ್ಕೆ ಆಗಮಿಸಲಿದ್ದಾರೆ ಎಂದು ಹಿಂದೂ ಮಹಾಗಣಪತಿ ಮಹಾ ಮಂಡಳಿಯ ಕರಣ ಸುಬೇದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಬೇದಾರ್ ಆಸ್ಪತ್ರೆ ಮುಂಭಾಗದಲ್ಲಿರುವ ಹಿಂದೂ ಮಹಾ ಗಣಪತಿಯ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಬಾಂಧವರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು
ವಿನಂತಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಕಲಾತಂಡಗಳ ಮೆರವಣಿಗೆಗೆ ಮೆರಗು ಬರುವಂತೆ ನಾಸಿಕ ಪುನೆ ಡೋಲು ಕುಣಿತ ಕಲಾ ತಂಡದವರಿಂದ ಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.ಆದ್ದರಿಂದ ತಾಲ್ಲೂಕಿನ ಎಲ್ಲಾ ಯುವ ಮಿತ್ರರು ಆಗಮಿಸಿ ಶೋಭೆ ತರಬೇಕೆಂದು ಕೇಳಿಕೊಂಡರು.

Leave a Reply

Your email address will not be published. Required fields are marked *