ನಂಬಿಸಿ ದ್ರೋಹ ಮಾಡಿದ ಬಿಜೆಪಿ: ಶಾಸಕಾಂಗ ಸಭೆಯಲ್ಲಿ ಆರ್.ಶಂಕರ ಆಕ್ರೋಶ ?

ಬೆಂಗಳೂರು:ನನ್ನನ್ನು ಬಿಜೆಪಿ ಪಕ್ಷಕ್ಕೆ ಕರೆದುಕೊಂಡು ಮಂತ್ರಿ ಸ್ಥಾನ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಮಾಜಿ ಸಚಿವರಾದ ಆರ್ ಶಂಕರ್ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಶಾಸಕಾಂಗ ಸಭೆಯಲ್ಲಿ ಆಕ್ರೋಶ ಭರಿತರಾಗಿ ಏರು ಧ್ವನಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗುತ್ತಿದ್ದು,ನನ್ನನ್ನು ಹಣ ತೆಗೆದುಕೊಂಡು ಬಿಜೆಪಿ ಪಕ್ಷಾಂತರವಾಗಿದ್ದೀರಿ ಎಂದು ಕ್ಷೇತ್ರದ ಜನತೆ ಮಾತನಾಡಿಕೊಳ್ಳುತ್ತಿದ್ದಾರೆ.ಜನತೆಗೆ ಹೇಗೆ ಮುಖ ತೋರಿಸಲಿ ಎಂದು ಸಿಟ್ಟಾಗಿದ್ದಾರೆ.

ನನಗೆ ಮಂತ್ರಿ ಸ್ಥಾನ ಕೊಟ್ಟು ಕೆಲವೇ ದಿನಗಳಲ್ಲಿ ಕಿತ್ತುಕೊಂಡಿರಿ.ನನಗೆ ನೀವು ಮಾಡಿದ ಮಹಾಮೋಸವಿದು ಎಂದು ಸಿಟ್ಟಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನು ಮನಗಂಡ ಮುಖ್ಯಮಂತ್ರಿಗಳು ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಕಟೀಲ್ ಸಮಾಧಾನ ಪಡಿಸಲು ಯತ್ನಿಸಿದ್ದು, ಮುಂದಿನ ಚುನಾವಣೆ ಅತಿ ಮುಖ್ಯವಾಗಿದ್ದು, ಯಾವುದೇ ಕಾರಣಕ್ಕೂ ಬೇಸರ ಮಾಡಿಕೊಳ್ಳಬೇಡಿ. ಯಾವುದೇ ಸಂದರ್ಭದಲ್ಲೂ ಪಕ್ಷ ನಿಮ್ಮ ಜೊತೆಗಿದೆ ಎಂದು ಸಮಾಧಾನ ಪಡಿಸಿದರು ಎಂದು ಎನ್ನಲಾಗಿದೆ.

ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ನೀಡಲು ಒತ್ತಾಯಿಸಿದ್ದು, ಚುನಾವಣೆ ಸಂದರ್ಭದಲ್ಲಿ ಶಾಸಕರ ಮನವೊಲಿಸಲು ನಾಯಕರು ಮುಂದಾಗಿದ್ದಾರೆಯೇ ಹೊರತು ನಮ್ಮ ಕಷ್ಟಗಳನ್ನು ಯಾರು ಕೇಳುತ್ತಿಲ್ಲ ಎಂದು ಶಾಸಕರು ಶಾಸಕಾಂಗ ಸಭೆಯಲ್ಲಿ ಅಸಮಾಧಾನ ಹೊರ ಹಾಕಿದರೂ ಎನ್ನಲಾಗಿದೆ.

Leave a Reply

Your email address will not be published. Required fields are marked *