ಟೌನ್ ಹಾಲ್ಗೆ ಸಂಗೊಳ್ಳಿ ರಾಯಣ್ಣನ ಹೆಸರು

ಶಹಾಪುರ:- ನಗರದ ಸರಕಾರ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿರುವ ಟೌನ್ ಹಾಲ್ ಗೆ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರಿಡಲಾಗುವುದು ಎಂದು ಶಾಸಕರಾದ ಶರಣಬಸಪ್ಪಗೌಡ ದರ್ಶನಪುರ ಹೇಳಿದರು.

ಇಂದು ನಗರದ ಭೀ,ಗುಡಿಯ ಪ್ರವಾಸಿ ಮಂದಿರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ತಳಿ ವಿಚಾರವಾಗಿ ಯುವಕರ ಜೊತೆ ಚರ್ಚಿಸಿ ಮಾತನಾಡಿದರು.ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾನ್ ಶೂರ, ಚನ್ನಮ್ಮನ ಭಂಟನಾಗಿ, ದೇಶದ ರಕ್ಷಣೆಗಾಗಿ ಹೋರಾಟ ಮಾಡಿ ತನ್ನ ಪ್ರಾಣವನ್ನೇ ಬಲಿಕೊಟ್ಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಂತಹ ಮಹಾನ್ ವ್ಯಕ್ತಿಗಳ ಹೆಸರಿಡುವುದು ಸಂತಸದ ವಿಷಯ ಎಂದು ತಿಳಿಸಿದರು.ಟೌನ್ ಹಾಲ್ ಮುಂದುಗಡೆಯ ಸ್ಥಳದಲ್ಲಿಯೇ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದು ಹೇಳಿದರು.

ಶಾಸಕರು 24 ಲಕ್ಷ ರೂಪಾಯಿ ತಮ್ಮ ಸ್ವಂತ ಖರ್ಚಿನಲ್ಲಿಯೇ ರಾಯಣ್ಣನ ಪಂಚಲೋಹ ಮೂರ್ತಿಯನ್ನು ಸಿದ್ಧಪಡಿಸಿದ್ದು, ಆದಷ್ಟು ಬೇಗನೆ ಕಾರ್ಯಕ್ರಮವನ್ನು ರೂಪಿಸಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದು ತಿಳಿಸಿದರು.

ತಾಲೂಕು ಸಂಗೊಳ್ಳಿ ರಾಯಣ್ಣ ಯುವಕ ಸಂಘದ ಅಧ್ಯಕ್ಷರಾದ ರವಿ ರಾಜಾಪುರ ರಾಜ್ಯ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳಿಯ ನಿರ್ದೇಶಕರಾದ ಶಾಂತಗೌಡ ನಾಗನಟಗಿ ಸೇರಿದಂತೆ ತಾಲೂಕಿನ ಪ್ರತಿ ಗ್ರಾಮದಿಂದಲೂ ನೂರಾರು ಯುವಕರು ಪಾಲ್ಗೊಂಡಿದ್ದರು