ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದು ನಿಶ್ಚಿತ : ಬಸವರಾಜ ಅತ್ನೂರು

ಶಹಾಪುರ-2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುವುದು ನಿಶ್ಚಿತ ಯಾವುದೇ ಅನುಮಾನವಿಲ್ಲ ಎಂದು ಸಿದ್ದರಾಮಯ್ಯ ಯುವ ಬ್ರಿಗೇಡ್ ಜಿಲ್ಲಾಧ್ಯಕ್ಷರಾದ ಬಸವರಾಜ ಅತ್ನೂರು  ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ಹಿಂದುಳಿದ ವರ್ಗದ ಜನನಾಯಕರೆಂದರೆ ಅದು ಸಿದ್ದರಾಮಯ್ಯನವರು ಮಾತ್ರ. ಮುಖ್ಯಮಂತ್ರಿಯಾಗಿ ಐದು ವರ್ಷ ಸಮರ್ಥವಾಗಿ ಆಡಳಿತ ನಡೆಸಿದರು.

ಹಣಕಾಸಿನ ವಿಚಾರದಲ್ಲಿ ಕಟ್ಟ ಕಡೆಗೆ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಂತೆ ಮಾಡಿದ್ದಾರೆ. ರಾಜಕೀಯ ವಿಚಾರದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಟ್ಟ ಕಡೆಯ ವ್ಯಕ್ತಿಗಳಿಗೆ ಅಧಿಕಾರ ಅನುಭವಿಸುವಂತೆ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಗ್ರಾಮ ಪಂಚಾಯಿತಿಗಳು ವಿಂಗಡಣೆಗೊಂಡು ಹೊಸ ಗ್ರಾಮ ಪಂಚಾಯಿತಿಗಳಾದ ನಂತರ ಚುನಾವಣೆಗೆಯಾಗಿ  ಮೀಸಲಾತಿ ವಿಚಾರದಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ಹೊಸ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೀಸಲಾತಿಯನ್ನು ರಾಜ್ಯದಲ್ಲಿ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾತಿ ನಿಗದಿಪಡಿಸಿ ಐದು ವರ್ಷ ಆಡಳಿತ ನಡೆಸುವಂತೆ ಮಾಡಿದರು. ಇಂತಹ ವ್ಯಕ್ತಿಗಳು ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದರಿಂದ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾಳಪ್ಪ ಸುಂಕದ, ಬಲಭೀಮ ಮಡ್ನಾಳ, ನಿಂಗಣ್ಣ ರಾಜಪುರ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *