ಭಾರತ ಜೋಡು ಯಾತ್ರೆಯ ಪೂರ್ವಭಾವಿ ಸಭೆ

ಶಹಪುರ: ತಾಲೂಕಿನ ಬೀಗುಡಿಯ ಬಲ ಭೀಮೇಶ್ವರ ಕಲ್ಯಾಣ ಮಂಟಪದಲ್ಲಿ ಭಾರತ್ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ಸಭೆಯಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಲು ಶಾಸಕರ ಆಪ್ತ ಸಹಾಯಕರಾದ ಶಿವಶರಣ ಇಟಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ಭಾರತ ಜೋಡು ಐಕ್ಯತೆ ಪಾದಯಾತ್ರೆಯೂ ಈಗಾಗಲೇ ಕರ್ನಾಟಕ ಪ್ರವೇಶಿಸಿದ್ದು, ರಾಜ್ಯದ ಹಲವಾರು ಕಾಂಗ್ರೆಸ್ ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಯಾತ್ರೆಯು ಯಶಸ್ವಿಯಾಗಿ ಸಾಗುತ್ತಿದೆ. ಕ್ಷೇತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಪುರ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿಮಿತ್ತ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು..

 

Leave a Reply

Your email address will not be published. Required fields are marked *