ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ, ಶಾಸಕರ ಕಚೇರಿಯಲ್ಲಿ ಸಂಭ್ರಮಾಚರಣೆ

ಶಹಾಪುರ:- ತಾಲೂಕಿನ ಶಾಸಕರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷರಾಗಿ ಕಲ್ಯಾಣ ಕರ್ನಾಟಕದ ಧೀಮಂತ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಧ್ಯಕ್ಷರಾಗಿ ಆಯ್ಕೆಯಾದ ನಿಮಿತ್ತ ಶಾಸಕರಿಗೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿ ಶಾಲು ಹಾಕಿ  ರಾಜ್ಯಸಭೆ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆಯವರ ಭಾವಚಿತ್ರ ನೀಡಿ ಸನ್ಮಾನಿಸಿದರು.

* ಹಲವಾರು ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಶರಣಪ್ಪ ಸಲಾದಪುರ, ಶಿವುಮಾಂತ‌ ಚಂದಾಪುರ ನೀಲಕಂಠ ಬಡಿಗೇರ ಮಲ್ಲಿಕಾರ್ಜುನ ಪೂಜಾರಿ ಶಂಕರ ಶಿಂಗೆ ಮಲ್ಲಪ್ಪ ಗೋಗಿ ಉಳಂಡಗೇರಿ ಜಿಲ್ಲಾ ಕಾಂಗ್ರೆಸ್ ವಕ್ತಾರರು, ಮೌನೇಶ್ ನಾಟೇಕರ್ ಯೂಥ್ ಅಧ್ಯಕ್ಷರು, ಹನುಮಂತ್ರಾಯಗೌಡ ಭೀಮರಾಯ ಕದರಾಪುರ ರವಿ ಎದುರುಮನಿ ಚಂದಪ್ಪ ಸಗರ ಸೇರಿದಂತೆ ನೂರಾರು ಕಾರ್ಯಕರ್ತರು  ಪಾಲ್ಗೊಂಡಿದ್ದರು.

 

Leave a Reply

Your email address will not be published. Required fields are marked *