ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ ಅಭಿನಂದನೆ ಸಲ್ಲಿಸಿದ ಶಾಂತಗೌಡ

ಶಹಾಪುರ: ಎಐಸಿಸಿ ಅಧ್ಯಕ್ಷರಾಗಿ ಕರ್ನಾಟಕದ ಧೀಮಂತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಯವರು ಆಯ್ಕೆಯಾಗಿರುವುದಕ್ಕೆ ಕಾಂಗ್ರೆಸ್ ಮುಖಂಡರಾದ ರಾಜ್ಯ ಕುರಿ ಮತ್ತು ಮೇಕೆ ಮಹಾಮಂಡಳಿ ನಿರ್ದೇಶಕರಾದ ಶಾಂತಗೌಡ ನಾಗನಟಿಯವರು ಅಭಿನಂದನೆ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಹಿಂದುಳಿದ ವರ್ಗದ ಜನನಾಯಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಚಿಂತಕರಾದ ಮಲ್ಲಿಕಾರ್ಜುನ ಖರ್ಗೆ ಯವರು ಎಐಸಿಸಿ ಅಧ್ಯಕ್ಷರಾಗಿರುವುದು ನಮ್ಮ ಭಾಗಕ್ಕೆ ಸಂತಸದ ವಿಚಾರವಾಗಿದೆ. 371 ಜೆ ಕಾಯ್ದೆಯ ಮೂಲಕ ಈ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಒದಗಿಸಿಕೊಟ್ಟಂತಹ ಧೀಮಂತ ನಾಯಕ ಖರ್ಗೆಯವರು ಎಂದು ಹೇಳಿದರು.

 

Leave a Reply

Your email address will not be published. Required fields are marked *