* ಎಐಸಿಸಿ ಅಧ್ಯಕ್ಷರಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ರವರು ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದು ರಾಜ್ಯ ಕೆಪಿಸಿಸಿ ವಕ್ತಾರರಾದ ಬಿ ಎಂ ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಶಾಸಕರಾದ ನಾಗೇಂದ್ರ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಅಪಾರ ಜನರು ಪಟಾಕಿ ಸಿಡಿಸಿ ಸಂತಸ ಹಂಚಿಕೊಂಡರು.
Video Player
00:00
00:00
ಕರ್ನಾಟಕದ ಎರಡನೇ ಕನ್ನಡಿಗ ಮಲ್ಲಿಕಾರ್ಜುನ್ ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ರಾಜ್ಯದಲ್ಲಿ 2023ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಅದೇ ರೀತಿಯಾಗಿ 2024ರಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಬರಲಿದ್ದು, ಕಾಂಗ್ರೆಸ್ ಪಕ್ಷ ದೇಶದ ಚುಕ್ಕಾಣಿ ಹಿಡಿಯಲಿದೆ ಎಂದು ತಿಳಿಸಿದರು.