ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡಬೇಡಿ ವೆಂಕಟರೆಡ್ಡಿ ಮುದ್ನಾಳ ಕರೆ

ಶಹಾಪುರ : ಕೇಂದ್ರ ಮತ್ತು ರಾಜ್ಯ ಸರಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುತ್ತಿವೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಕ್ಷೇತ್ರದಾದ್ಯಂತ ಹಲವಾರು ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಸರಕಾರ ಮೇಲ್ದರ್ಜೆಗೇರಿಸಿದೆ ಎಂದು ಶಾಸಕರಾದ ವೆಂಕಟರೆಡ್ಡಿ ಮುದ್ನಾಳ ಹೇಳಿದರು. ಐಕೂರು ಗ್ರಾಮದಲ್ಲಿ ನೂತನ ಪ್ರೌಢಶಾಲೆಯನ್ನು ಶಾಲಾ ಮಕ್ಕಳಿಂದಲೇ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಪ್ರಾಥಮಿಕ ಶಾಲೆಗಳಿಗೆ ಹೆಚ್ಚಿದ್ದು, ಪ್ರೌಢಶಾಲೆಗಳ ಸಂಖ್ಯೆ ಕಡಿಮೆ ಇರುವ ಕಾರಣ ಗ್ರಾಮೀಣ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಸರಕಾರ ಹಲವಾರು ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳಾಗಿ ಮೇಲ್ದರ್ಜೆಗೇರಿಸಿದೆ. ಇದರಿಂದ ಶಾಲಾ ಮಕ್ಕಳಿಗೆ ತಮ್ಮೂರಿನಲ್ಲಿಯೆ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.ಗ್ರಾಮೀಣ ಮಕ್ಕಳಲ್ಲಿ ಹಲವಾರು ಪ್ರತಿಭೆಗಳಿರುತ್ತವೆ. ಪಾಲಕರು ಯಾವುದೇ ಸಂದರ್ಭದಲ್ಲಿಯೂ ಮಕ್ಕಳಿಗೆ ಶಿಕ್ಷಣ ವಂಚಿತರನ್ನಾಗಿ ಮಾಡಬಾರದು ಎಂದು ಪಾಲಕರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಸಿದ್ದನಗೌಡ ಕಾಡಂನೋರ ಮಾಜಿ ಜಿಲ್ಲಾ ಪಂಚಾಯತ ಸದಸ್ಯರು, ಶರಣಗೌಡ ಬಾಡಿಯಾಳ, ಮಹೇಶ ರೆಡ್ಡಿ ಮುದ್ನಾಳ, ಶರಣಗೌಡ ಐಕೂರು ಬಿಜೆಪಿ ಗ್ರಾಮೀಣ ಯುವ ಮೋರ್ಚಾ ಜಿಲ್ಲಾಧ್ಯಕ್ಷರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಭುಗೌಡ ಮಾಲಿ ಪಾಟೀಲ ದೇವು ಮಡಿವಾಳ, ರಾಜಪ್ಪ ಕವಲಿ, ಅಯ್ಯಣ್ಣ ಗುತ್ತೇದಾರ ಶಾಲೆಯ ಮುಖ್ಯ ಗುರುಗಳು ಸೇರಿದಂತೆ ಗ್ರಾಮಸ್ಥರು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author