ಡಾ.ಎ.ಬಿ. ಮಾಲಕರೆಡ್ಡಿ ಕಾಂಗ್ರೆಸ್ ಗೆ ? : ಯಾದಗಿರಿ ಕ್ಷೇತ್ರದಲ್ಲಿ ಸಂಚಲನ : ಟಿಕೆಟ್ ಆಕಾಂಕ್ಷಿಗಳಲ್ಲಿ ಕಸಿವಿಸಿ

ವಡಗೇರಾ : 2023 ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು ಯಾದಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ದಂಡು ದಿನೇ ದಿನೇ ಹೆಚ್ಚುತ್ತಿದೆ. ಇತ್ತೀಚೆಗೆ ಮಾಜಿ ಸಚಿವರಾದ ಡಾ.ಎ.ಬಿ.ಮಾಲಕರೆಡ್ಡಿ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದು ಕಾಂಗ್ರೆಸ್ ಬರುವ ಇಂಗಿತವನ್ನು ವ್ಯಕ್ತಪಡಿಸಿರುವುದು ಹಲವು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಕಸಿವಿಸಿ ಉಂಟಾಗಿದೆ. ಹೈಕಮಾಂಡ್ ಸರ್ವೆಯ ಪ್ರಕಾರ ಯಾದಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ವಾತಾವರಣವಿದ್ದು, ಅದರಲ್ಲಿ ವ್ಯಕ್ತಿಯ ಸರ್ವೆಯಲ್ಲಿ ಡಾ.ಮಾಲಕರೆಡ್ಡಿಯವರನ್ನು ಒಪ್ಪಿಕೊಂಡಿರುವುದು ಹೈಕಮಾಂಡ್ ಗಮನಕ್ಕೆ ಬಂದಿದೆ.

ಸಿದ್ದರಾಮಯ್ಯನವರ ಕಾಂಗ್ರೆಸ್ ಸರಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗದ ಕಾರಣ ಡಾ. ಮಾಲಕರೆಡ್ಡಿ ಮುನಿಸಿಕೊಂಡಿದ್ದರು. ಪ್ರಿಯಾಂಕ ಖರ್ಗೆಯವರಿಗೆ ಸಚಿವ ಸ್ಥಾನ ಕೊಟ್ಟಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಮೇಲೆ ಉಗ್ರ ರೂಪ ತಾಳಿದ್ದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಲು ಬಿಜೆಪಿ ಪಕ್ಷ ಸೇರಿಕೊಂಡರು. ಬಿಜೆಪಿ ಪಕ್ಷದಲ್ಲಿ ತಮಗೆ ಸರಿಯಾದ ಸ್ಥಾನಮಾನ ಸಿಗದ ಕಾರಣ ಮತ್ತೆ ಕಾಂಗ್ರೆಸ್ ಕದತಟ್ಟಿದ್ದಾರೆ ?.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸುವಂತೆ ಸಲಹೆ ನೀಡಿದ್ದಾರೆ.ಪಕ್ಷ ಸೇರ್ಪಡೆಗೆ ನನ್ನದೇನು ಅಭ್ಯಂತರವಿಲ್ಲ.ಗೆಲ್ಲುವ ವ್ಯಕ್ತಿ ಮುಖ್ಯ ಎಂದು ಹೇಳಿದ್ದಾರೆ ಎನ್ನಲಾಗುತ್ತಿದ್ದು,ಎಐಸಿಸಿ ಅಧ್ಯಕ್ಷರು ಯಾವ ರೀತಿ ಸ್ಪಂದಿಸುತ್ತಾರೋ ಕಾದು ನೋಡಬೇಕಿದೆ.

ಕಾಂಗ್ರೆಸ್ಸಿನ ಕೆಲವು ನಾಯಕರು ಮಾಲಕರೆಡ್ಡಿ ಯವರನ್ನು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ನಮಗೆ ಟಿಕೆಟ್ ತಪ್ಪಿಸುವ ಸಂಭವ ಇದೆ ಎಂದು ಹಲವು ನಾಯಕರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಸೋಲನ್ನು ಮುಂದಿಟ್ಟುಕೊಂಡು ಪಕ್ಷದಲ್ಲಿ ಸೇರ್ಪಡೆ ಮಾಡಿಕೊಳ್ಳದಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಚೆನ್ನಾರೆಡ್ಡಿ ತುನ್ನೂರು, ಶರಣ ಗೌಡ ಕಾಮರೆಡ್ಡಿ, ಭೀಮಣ್ಣ ಮೇಟಿ, ಶರಣಪ್ಪ ಸಲಾದಪುರ,ಬಸ್ಸಗೌಡ ಬಿಳಾರ,ವಿನೋದ್ ಪಾಟೀಲ್ ಸೇರಿದಂತೆ ಹಲವಾರು ಜನರು ಟಿಕೆಟ್ ಗಾಗಿ ಅರ್ಜಿ ಹಾಕಿದ್ದಾರೆ. ಇಲ್ಲಿಯವರೆಗೂ ಯಾದಗಿರಿ ಕ್ಷೇತ್ರದಲ್ಲಿ ಯಾರೂ ಕೂಡ ಪಕ್ಷದಿಂದ ಸಕ್ರಿಯವಾಗಿ ಓಡಾಡಿರದ ಕಾರಣ ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಎನ್ನುವುದು ತಿಳಿಯುತ್ತಿಲ್ಲ.

ಡಾ.ಮಾಲಕರೆಡ್ಢಿ ಕಾಂಗ್ರೆಸ್ ಟಿಕೆಟ್ ದೊರಕಿದರೆ ಖಂಡಿತ ಗೆಲುವು ಸಾಧಿಸುತ್ತಾರೆ ಎನ್ನುತ್ತಾರೆ ಕ್ಷೇತ್ರದ ಜನತೆ. ಇನ್ನೂ ಅವರ ಅಭಿಮಾನಿಗಳು ಕ್ಷೇತ್ರದಲ್ಲಿ ಅವರ ಬರುವಿಕೆಗಾಗಿ ಕಾಯುತ್ತಿದ್ದಾರೆ.ಎಐಸಿಸಿ ಅಧ್ಯಕ್ಷರ ಮೇಲೆ ಡಾ.ಮಾಲಕರೆಡ್ಡಿಯವರ ಕಾಂಗ್ರೆಸ್ ಸೇರ್ಪಡೆ ನಿಂತಿದೆ.

ಕ್ಷೇತ್ರದಲ್ಲಿ ಶಾಸಕನಾಗಿ ಸಚಿವನಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ವೈಯಕ್ತಿಕ ಕಾರಣಗಳಿಂದ ಪಕ್ಷ ತೊರೆದಿದ್ದೇನೆಯೇ ಹೊರತು ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆಯವರ ಮೇಲೆ ನನಗೆ ಯಾವುದೇ ದ್ವೇಷವಿಲ್ಲ. ಕೆಲವು ದಿನಗಳಿಂದ ಕ್ಷೇತ್ರದಾದ್ಯಂತ ಸಂಚರಿಸಿದ್ದು, ನನ್ನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಿಕೊಂಡು ಚುನಾವಣೆಗೆ ನಿಲ್ಲಿ ಎಂದು ಒತ್ತಾಯಿಸುತ್ತಿದ್ದಾರೆ.

ಡಾ.ಎ.ಬಿ.ಮಾಲಕರೆಡ್ಡಿ ಮಾಜಿ ಸಚಿವರು

About The Author