ಮಹಾಶೈವ ಧರ್ಮಪೀಠದ ಶ್ರೀ ಮಹಾಕಾಳಿ ಮಂದಿರದಲ್ಲಿ 108 ದೀಪೋತ್ಸವ ಕಾರ್ಯಕ್ರಮ

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಮಹಾಶೈವ ಧರ್ಮಪೀಠದ ಶ್ರೀಕ್ಷೇತ್ರ ಕೈಲಾಸದಲ್ಲಿ ಇಂದು ಬೆಳಿಗ್ಗೆ ಮಹಾಕಾಳಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.ಮಹಾಶೈವ ಧರ್ಮಪೀಠದ‌ ಪೀಠಾಧ್ಯಕ್ಷರಾದ ಪೂಜ್ಯ ಶ್ರೀ ಮುಕ್ಕಣ್ಣ ಕರಿಗಾರ ಅವರ ಸಾನ್ನಿಧ್ಯ ಮತ್ತು ನೇತೃತ್ವದಲ್ಲಿ ಮಹಾಕಾಳಿ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.
ಪೀಠಾಧ್ಯಕ್ಷರಾದ ಶ್ರೀ ಮುಕ್ಕಣ್ಣ ಕರಿಗಾರ ಅವರು ಚಂಡಿಹೋಮ ನೆರವೇರಿಸಿ ಮಹಾಕವಿ ಕಾಳಿದಾಸ ಪ್ರತಿಪಾದಿತ ‘ ಕಾಲಾಮೃತಮ್’ ಶಾಸ್ತ್ರೋಕ್ತ ರೀತಿಯಲ್ಲಿ ಮಹಾಕಾಳಿ ಮೂರ್ತಿಯ ಪ್ರತಿಷ್ಠಾಪನೆ ನೆರವೇರಿಸಿದರು.
ಸುಲ್ತಾನಪುರದ ಗಂಗಾಧರ ಶಾಂತಾಶ್ರಮದ ಶರಣರಾದ ಶರಣಪ್ಪನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಮಹಾಕಾಳಿ ಮೂರ್ತಿ ಪ್ರತಿಷ್ಠಾಪನೆಯ ನಂತರ ಮಹಾಕಾಳಿ ಮೂರ್ತಿಪ್ರತಿಷ್ಠಾಪನೆಗೆ ನೆರವು,ಸೇವೆ ಸಲ್ಲಿಸಿದ ಭಕ್ತರುಗಳನ್ನು ಸನ್ಮಾನಿಸಲಾಯಿತು.ಗಬ್ಬೂರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಹಸ್ರಾರು ಸಂಖ್ಯೆಯ ಭಕ್ತರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *