ಹಯ್ಯಳ ಬಿ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮೀಣ ಕ್ರೀಡಾಕೂಟ :ಗ್ರಾಮೀಣ ಕ್ರೀಡೆಗಳು ಗ್ರಾಮೀಣ ಪ್ರದೇಶದ ಪ್ರತಿಭೆಗಳನ್ನು ಗುರುತಿಸಲು ಸಹಕಾರಿ : ಮೌನೇಶ ಪೂಜಾರಿ

ವಡಗೇರಾ : ಸರಕಾರವು ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ರೀಡೆಗಳನ್ನು ಹಮ್ಮಿಕೊಂಡಿರುವುದರಿಂದ ಗ್ರಾಮೀಣದ ಪ್ರದೇಶದ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗಲಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಯಾವುದೆ ಗ್ರಾಮದ  ತಂಡ ಜಯಿಸಿದೆರೆ ನಮ್ಮ ಗ್ರಾಮ ಪಂಚಾಯಿತಿ ಹೆಸರು ಬರುತ್ತದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮೌನೇಶ ಪೂಜಾರಿ ಹೇಳಿದರು. ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಹಯ್ಯಳ ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದರು.

ಶಾಲಾ ಮುಖ್ಯ ಗುರುಗಳಾದ ಶರಣಪ್ಪ ಮಾತನಾಡಿ ಗ್ರಾಮ ಪಂಚಾಯಿತಿಯಿಂದ ಕ್ರೀಡೆಗಳನ್ನು ನಡೆಸುವುದು ಒಳ್ಳೆಯ ಕಾರ್ಯ ಎಂದು ಹೇಳಿದರು.ಕಂದಾಯ ನಿರೀಕ್ಷಕರಾದ ಸಿದ್ದಯ್ಯ ಸ್ವಾಮಿ ಮಾತನಾಡಿ, ಗ್ರಾಮೀಣ ಪ್ರದೇಶ ಪ್ರತಿಭೆಗಳು ಇಂದು ರಾಷ್ಟ್ರಾದ್ಯಂತ ನಡೆಯುವ ಕ್ರೀಡೆಗಳಲ್ಲಿ ಜಯಗಳಿಸಿದ್ದಾರೆ. ಕ್ರೀಡೆಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢ ಆರೋಗ್ಯವಂತರನ್ನಾಗಿ ಮಾಡುತ್ತವೆ ಎಂದು ತಿಳಿಸಿದರು.

ಖೋ ಖೋ ಕ್ರೀಡೆಯಲ್ಲಿ ಹಯ್ಯಳ ಬಿ ತಂಡ ಪ್ರಥಮ ಸ್ಥಾನ ಪಡೆದರೆ, ಕಬ್ಬಡಿಯಲ್ಲಿ ಮದರಕಲ ಪ್ರಥಮ ಸ್ಥಾನ,ಹಯ್ಯಳ ಬಿ ದ್ವಿತೀಯ ಸ್ಥಾನ ಪಡೆಯಿತು.ಎಲ್ಲಾ ಪ್ರಶಸ್ತಿಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಕಾಮಣ್ಣ ಮುಖೇಶ ಬಿಲ್ ಕಲೇಕ್ಟರ್ ಈರಣ್ಣ ಸಾಹು, ನಾಗರಾಜ ಡಿಇಓ,ಗ್ರಾ.ಪಂ.ಸಿಬ್ಬಂದಿ ಸೇರಿದಂತೆ ಮದರ್ಕಲ್ ಯಕ್ಷಿಂತಿ ಹಯ್ಯಳ  ಗ್ರಾಮದ ಕ್ರೀಡಾಪಟುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಕಾಮಣ್ಣ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

About The Author