ಬಾಬು ಜಗಜೀವನರಾಂ ರವರ ಕೊಡುಗೆ ಅಪಾರ:ದರ್ಶನಾಪುರ

ಶಹಾಪುರ:ಅಧಿಕಾರ ಮತ್ತು ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಡಾ.ಬಾಬು ಜಗಜೀವನರಾಂ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು. ತಾಲೂಕ ಆಡಳಿತ ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ನಗರಸಭೆ ಆವರಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ ೧೧೫ ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನೆ ಸದಾ ಬಯಸುತ್ತಿದ್ದು ಅವರು ದೇಶದ ಜನರ ಆಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಿದರು. ಇಂತಹ ಮಹಾನ್ ನಾಯಕರ ಕೊಡುಗೆ ತತ್ವಾದರ್ಶಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು.ಆಧುನಿಕ ಯುಗದಲ್ಲಿ ಶಿಕ್ಷಣ ಮುಖ್ಯವಾಗಿದ್ದು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಎಂದು ತಿಳಿಸಿದರು.

ಅಕ್ಕಮಹಾದೇವಿ ವಿಶ್ವ ವಿದ್ಯಾಲಯದ ಉಪಾನ್ಯಾಸಕರಾದ ಡಾ.ಧರ್ಮಣ್ಣ ಬಡಿಗೇರ ಮಾತನಾಡಿ ಬಾಬು ಜಗಜೀವನರಾಂ ಅವರು ದೇಶ ಕಂಡ ಮಹಾನ್ ಸ್ವಾತಂತ್ರö್ಯ ಹೋರಾಟಗಾರ ಹಾಗೂ ದಕ್ಷ ಆಡಳಿತಗಾರರಾಗಿದ್ದರು. ಹಸಿರು ಕ್ರಾಂತಿಯ ಹರಿಕಾರರಾಗಿ ಜನಸಾಮಾನ್ಯರು ಎಂದಿಗೂ ಮರೆಯದ ವ್ಯಕ್ತಿತ್ವವನ್ನು ಹೊಂದಿದ್ದರು. ಶೋಷಿತರ ಹಕ್ಕಿಗಾಗಿ ಹೋರಾಡಿದ ಡಾ.ಬಾಬು ಜಗಜೀವನ ರಾಮ್ ಅವರು ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಡವರು ದೀನ ದಲಿತರ ಕಣ್ಣಿರು ಒರೆಸಿದ ಶ್ರೇಷ್ಠ ವ್ಯಕ್ತಿತ್ವದವರಾಗಿದ್ದರು ಎಂದರು. ನಗರದ ಸಿ.ಬಿ ಕಮಾನದಿಂದ ನಗರಸಭೆ ಆವರಣದವರೆಗೆ ಭಾವಚಿತ್ರ ಮೆರವಣಿಗೆ ನಡೆಯಿತು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ, ಸಮಾಜದ ಮುಖಂಡರುಗಳಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಮಧುರಾಜ್ ಕೂಡ್ಲಗಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಮಲ್ಲಿಕಾರ್ಜುನ್ ಚಿಲ್ಲಾಳ್, ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್, ಪೌರಾಯುಕ್ತ ಓಂಕಾರ ಪೂಜಾರಿ, ಸಮಾಜ ಕಲ್ಯಾಣ ಇಲಖೆ ಅಧಿಕಾರಿ ರಾವುತಪ್ಪ ಬಿ, ಸಿಡಿಪಿಓ ಗುರುರಾಜ್, ಪಿಎಸ್‌ಐ ಶ್ಯಾಮಸುಂದರ, ಆಶ್ರಯ ಕಮಿಟಿ ಅಧ್ಯಕ್ಷ ವಸಂತ ಸುರಪುರಕರ್, ನಗರಸಭೆ ಸದಸ್ಯರುಗಳಾದ ಬಸವರಾಜ ಚೆನ್ನೂರ, ಶಿವುಕುಮಾರ ತಳವಾರ, ಮಹೇಶ, ಚಂದ್ರಶೇಖರ ಲಿಂಗದಳ್ಳಿ, ಶಾಂತಪ್ಪ ಕಟ್ಟಿಮನಿ, ರುದ್ರಪ್ಪ ಹುಲಿಮನಿ, ನಾಗಣ್ಣ ಬಡಿಗೇರ, ವಿಜಯಕುಮಾರ ಎದುರುಮನಿ, ಭೀಮರಾಯ ರಸ್ತಾಪುರ, ಭೀಮರಾಯ ದೊಡ್ಡಮನಿ, ಗುರು ದೊಡ್ಮನಿ, ಭೀಮರಾಯ ಕಾಂಗ್ರೇಸ್, ನ್ಯಾಯವಾದಿಗಳಾದ ವಾಸುದೇವ, ನಿಜಗುಣ ದೋರನಹಳ್ಳಿ ಮಲ್ಲಿಕಾರ್ಜುನ್ ಕಟ್ಟಿಮನಿ, ಶಿವಪುತ್ರ ಜವಳಿ, ಬಸವರಾಜ ಪೂಜಾರಿ, ಸೇರಿದಂತೆ ಅಧಿಕಾರಿಗಳು, ಸಮಾಜದ ಮುಖಂಡರು, ಯುವಕರು ಪಾಲ್ಗೊಂಡಿದ್ದರು.

About The Author