ಮದರಕಲ್ ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆ ಶಮನ

ವಡಗೇರ : ತಾಲೂಕಿನ ಹಯ್ಯಳ ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮದರಕಲ ಗ್ರಾಮದಲ್ಲಿ ನೀರಿನ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಸಭೆ ಕರೆದು ಮದರಕಲ್ ಗ್ರಾಮದ ನೀರಿನ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಯಂಕಣ್ಣ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.
    ನಾನು ಹಯ್ಯಳ ಬಿ ಗ್ರಾಮ ಪಂಚಾಯಿತಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದು, ಇಲ್ಲಿಂದ ವರ್ಗಾವಣೆಗೊಂಡ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕೆಲ ತಾಂತ್ರಿಕ ತೊಂದರೆಗಳಿಂದ ಚಾರ್ಜ್ ಕೊಡಲು ತಡವಾಗಿರುವುದರಿಂದ ತೊಂದರೆ ಉಂಟಾಗಿದ್ದವು.ನಾನೆ ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ ಕುಡಿಯುವ ನೀರಿನ ಪೈಪ್ ಅನ್ನು ಅಳವಡಿಸಿದ್ದು  ಇದು ತಾತ್ಕಾಲಿಕ ಪೈಪ್ ಆಗಿದ್ದ ಕಾರಣ ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದು ತಿಳಿಸಿದರು.
     ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮೌನೇಶ್ ಪೂಜಾರಿ ಅವರು ಮಾತನಾಡಿ, ಮದರ್ಕಲ್ ಗ್ರಾಮದಲ್ಲಿ ಗ್ರಾಮ ಪಂಚಾಯತಿಯ ಯಾವ ಸದಸ್ಯರು ಕುಡಿಯುವ ನೀರಿನ ಪೈಪ್ ಒಡೆದ ಬಗ್ಗೆ ನನ್ನ ಗಮನಕ್ಕೆ ತಂದಿಲ್ಲ. ಪೈಪ್ ಒಡೆದು ನಾಲ್ಕು ದಿನಗಳಾಗಿವೆ. ತಕ್ಷಣವೇ ನಾನು ಸ್ಪಂದಿಸಿ ಎರಡೇ ದಿನಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದೇನೆ ಎಂದರು.ನೀರಿನ ಪೈಪ್ ಒಡೆದಿರುವ ಬಗ್ಗೆ  ಗ್ರಾಮದ ಪಂಪ್ ಆಪರೇಟರ್ ನನ್ನ ಗಮನಕ್ಕೆ ತಂದ ಎರಡು ದಿನಗಳಲ್ಲಿಯೇ ಗ್ರಾಮದಲ್ಲಿನ ಕುಡಿಯುವ ನೀರಿಗೆ ಪೈಪ್ ಅಳವಡಿಸಲಾಗಿದೆ ಎಂದು ಹೇಳಿದರು.
ನಮ್ಮ ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ನಾಲ್ಕು ದಿನಗಳಾಗಿದ್ದವು. ತಾತ್ಕಾಲಿಕವಾಗಿ ಪೈಪನ್ನು ಅಳವಡಿಸಲಾಗಿದ್ದು, ತಾತ್ಕಾಲಿಕವಾಗಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲಾಗಿದೆ. ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿ ಕೊಡುತ್ತೇನೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಶಂಭುರೆಡ್ಡಿ
ಗ್ರಾಮ ಪಂಚಾಯಿತಿ ಸದಸ್ಯರು ಮದರಕಲ್

About The Author