ರೈತ ಸಂಘ ಹಸಿರು ಸೇನೆ ವತಿಯಿಂದ ಪ್ರತಿಭಟನೆ

ವಡಗೇರಾ : ಪ್ರಸ್ತುತ ವರ್ಷ ಅತಿವೃಷ್ಟಿಯಿಂದ ಹತ್ತಿ ತೊಗರಿ ಬೆಳೆಗಳ ಇಳುವರಿ ಕಡಿಮೆ ಬಂದಿದ್ದು, ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಇಲ್ಲದೆ ರೈತರು  ಕಂಗಲಾಗಿದ್ದಾರೆ. ವಾಣಿಜ್ಯ ಬೆಳೆಗಳಾದ ತೊಗರಿ ಹತ್ತಿ ಬೆಳೆಯಲು ರೈತರು ಸಾಕಷ್ಟು ಹಣ ಖರ್ಚು ಮಾಡಿದ್ದು,ಆದರೆ ಬೆಲೆ  ಕಡಿಮೆಯಾಗಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ವಡಗೇರಾ‌ ತಾಲೂಕು ಘಟಕದ ವತಿಯಿಂದ ಸೋಮವಾರ ಬೆ.10 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಣ್ಣ ಜಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ವಡಗೇರಾ ಪಟ್ಟಣದ ಹಳೆ ಪೊಲೀಸ ಠಾಣೆಯಿಂದ ವಾಲ್ಮೀಕಿ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆಯ ಮೂಲಕ ತಹಸಿಲ್ದಾರರ ಮೂಲಕ  ಮುಖ್ಯಮಂತ್ರಿಗಳಿಗೆ  ಮನವಿ ಪತ್ರ ಸಲ್ಲಿಸಲಾಗುವುದು. ರಾಜ್ಯ ಘಟಕದ ಮಲ್ಲಿಕಾರ್ಜುನ ಸತ್ಯಂಪೇಟೆ, ನಾಗರತ್ನ ಪಾಟೀಲ, ಶರಣು ಮಂದರವಾಡ,ರೈತ ಸಂಘದ ಮಹಿಳಾ ಘಟಕ ಜಿಲ್ಲಾ ಅಧ್ಯಕ್ಷರಾದ ಚಂದ್ರಕಲಾ ಬಾಗುರ, ರೈತ ಸಂಘದ ತಾಲೂಕ ಘಟಕ ಅಧ್ಯಕ್ಷರಾದ ಮಲ್ಲಣ್ಣ ನೀಲಳ್ಳಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *