ನಿಖಿಲ್ ಶಂಕರ್ ರವರಿಂದ ನಲಪಾಡ್ ಗೆ ಬೆಳ್ಳಿ ಖಡ್ಗ  ವಿತರಣೆ

ಯಾದಗಿರಿ : ಯಾದಗಿರಿ ಜಿಲ್ಲಾ ಯುವ ಕಾಂಗ್ರೆಸ್  ಯುವ ಘಟಕದ ಕಾರ್ಯಕಾರಣಿ ಸಭೆಗೆ ಆಗಮಿಸಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ  ಮಹಮ್ಮದ್ ಹ್ಯಾರಿಸ್ ನಲಪಾಡ್ ರವರನ್ನು ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ರಾಜ್ಯ ಪ್ರದಾನ ಕಾರ್ಯದರ್ಶಿ  ನಿಖಿಲ್ ವಿ ಶಂಕರ್  ಬೆಳ್ಳಿ ಖಡ್ಗವನ್ನು  ನೆನಪಿನ ಕಾಣಿಕೆಯಾಗಿ ನೀಡಿ ಸನ್ಮಾನಿಸಿದರು.
   ಕಾಂಗ್ರೆಸ್ ರಾಜ್ಯ ಯುವ ಘಟಕ ಅಧ್ಯಕ್ಷರಾದ ಮಹಮ್ಮದ್ ಹ್ಯಾರಿಸ್ ನಲಪಾಡ  ಮಾತನಾಡಿ, ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಯುವ ಘಟಕವು ಹೆಚ್ಚಿನ ರೀತಿಯಲ್ಲಿ ಶ್ರಮಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದು ಅಗತ್ಯವಿದೆ ಎಂದು ಕಾರ್ಯಕರ್ತರಿಗೆ ತಿಳಿ ಹೇಳಿದರು.
 ಜನ ಬೆಲೆ ಏರಿಕೆಗಳಿಂದ  ಬೇಸತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
 ಕಾಂಗ್ರೆಸ್ ಯುವ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಿಖಿಲ್ ಶಂಕರ್ ಹಾಗೂ ಕಾಂಗ್ರೆಸ್ ಯುವ ಘಟಕ ಜಿಲ್ಲಾಧ್ಯಕ್ಷರಾದ ರಾಜಕುಮಾರ್ ನಾಯಕ್ ಕಾಂಗ್ರೆಸ್ ಯುವ ಘಟಕದ ಜಿಲ್ಲಾ ಪದಾಧಿಕಾರಿಗಳು ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

About The Author