ಯಾದಗಿರಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯನವರಿಗೆ ಐಕೂರು ಅಶೋಕ ಮನವಿ

 

ಐಕೂರು ಅಶೋಕ

ವಡಗೇರಾ : ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾದಗಿರಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ವರ್ತೂರು ಪ್ರಕಾಶ್ ಯುವ ಗರ್ಜನೆಯ ಜಿಲ್ಲಾಧ್ಯಕ್ಷರಾದ ಐಕೂರು ಅಶೋಕ‌ ಮನವಿ ಮಾಡಿಕೊಂಡಿದ್ದಾರೆ. ಪ್ರಜಾ ಧ್ವನಿ ಯಾತ್ರೆಯಲ್ಲಿ ಯಾದಗಿರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಐಕೂರು ಅಶೋಕ, ಯಾದಗಿರಿ ಜಿಲ್ಲೆಯಾದ್ಯಂತ ಹಿಂದುಳಿದ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ತಾವು ಈ ಕ್ಷೇತ್ರದಲ್ಲಿ ಸ್ಪರ್ಧಿಸುವುದರಿಂದ ಯಾದಗಿರಿ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದ ಕ್ಷೇತ್ರಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.