ಜನಸಾಮಾನ್ಯರ ನಿರಾಶದಾಯಕ ಬಜೆಟ್ ಚರಿತಾ ಕೊಂಕಲ್ ಆರೋಪ

ಯಾದಗಿರಿ: ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಸಾಮಾನ್ಯ ಜನರ ನಿರಾಶಾದಾಯಕ ಬಜೆಟ್ ಇದಾಗಿದೆ. ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ . ರಾಜ್ಯದಿಂದ ಅತಿ ಹೆಚ್ಚು ಸಂಸದರು ಆಯ್ಕೆಯಾಗಿದ್ದರು  ಕೂಡ ಹೆಚ್ಚಿನ ರೀತಿಯ ಅನುದಾನ ತರವಲ್ಲಿ ವಿಫಲರಾಗಿದ್ದಾರೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿ ಚರಿತಾ ಕೊಂಕಲ ಆರೋಪಿಸಿದ್ದಾರೆ.

ರೈತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿಲ್ಲ. ಯುವಕರ ನಿರುದ್ಯೋಗ ಸಮಸ್ಯೆ ಬಗೆಹರಿಸುವ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಮುಂದಿನ ಚುನಾವಣೆಯ ದೃಷ್ಟಿಯನ್ನಿಟ್ಟುಕೊಂಡು ಮಂಡಿಸಿದ ಬಜೆಟ್ ಇದಾಗಿದೆ. ಹಣದುಬ್ಬರ ಹಾಗೂ ದಿನ ಬಳಕೆಯ ವಸ್ತುಗಳ ಬೆಲೆ ಕಡಿಮೆ ಮಾಡುವ ಯಾವುದೇ ಅಂಶಗಳಿಲ್ಲ .ಅಡುಗೆ ಗ್ಯಾಸ್ ಬೇಳೆಕಾಳು ಹಾಲು ಡೀಸೆಲ್ ಪೆಟ್ರೋಲ್ ಇನ್ನಿತರ ವಸ್ತುಗಳ ಬೆಲೆಗಳನ್ನು ಹೆಚ್ಚು ಮಾಡಿ ಜನರ ಹಣ ಲೂಟಿ ಮಾಡಿದ್ದಾರೆ. ಕೃಷಿ. ಶಿಕ್ಷಣ ಆರೋಗ್ಯ ಕ್ಷೇತ್ರಕ್ಕೆ ಹೇಳಿಕೊಳ್ಳುವಂತ ಕೊಡುಗೆ ನೀಡಿಲ್ಲ.ದಲಿತರು ಹಿಂದುಳಿದ ವರ್ಗದ ಜನರಿಗೆ ಹಾಗು ಆದಿವಾಸಿಗಳ ಅಭಿವೃದ್ಧಿ ಮತ್ತು ಯಾವುದೇ ಸೂಕ್ತ ಭದ್ರತೆ ಇಲ್ಲದ ಬಜೆಟ್ ಇದಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

About The Author