ಶಹಪುರಕ್ಕೆ ಸಿದ್ದರಾಮಯ್ಯ ಆಗಮನ ಕೆಪಿಸಿಸಿ ಕಾರ್ಮಿಕ ಘಟಕದಿಂದ ನೂರಾರು ಕಾರ್ಯಕರ್ತರು ಪಾಲ್ಗೊಳ್ಳುವರು

ಯಾದಗಿರಿ : ರಾಜ್ಯ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಪ್ರಜಾಧ್ವನಿ ಯಾತ್ರೆ ಬಸ್ ಯಾತ್ರೆ ಹಮ್ಮಿಕೊಂಡಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ 112 ವಿಧಾನಸಭಾ ಮತ್ತು 12 ಲೋಕಸಭಾ ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪ್ರಜಾಧ್ವನಿಯಾತ್ರೆ ಕೈಗೊಂಡಿದ್ದು, ನಾಳೆ ಶಹಾಪುರಕ್ಕೆ ಸಿದ್ದರಾಮಯ್ಯನವರು ಆಗಮಿಸಲಿದ್ದು ಜಿಲ್ಲೆಯ  ಕೆಪಿಸಿಸಿ ರಾಜ್ಯ ಕಾರ್ಮಿಕ ಘಟಕದಿಂದ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳುವರು ಎಂದು ರಾಜ್ಯ ಕೆಪಿಸಿಸಿ ವಿಭಾಗದ ಕಾರ್ಯದರ್ಶಿಗಳು, ಯಾದಗಿರಿ ಜಿಲ್ಲಾ ಉಸ್ತುವಾರಿಗಳಾದ ಅಯ್ಯಪ್ಪ ಗಬ್ಬೂರು ತಿಳಿಸಿದರು.
ಈ ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು,
ಪ್ರಜಾ ಧ್ವನಿ ಬಸ್ ಯಾತ್ರೆ ರಾಜ್ಯಾದ್ಯಂತ ಯಶಸ್ವಿಯಾಗುತ್ತಿದ್ದು ಯಾತ್ರೆಗಳಲ್ಲಿ ಸಾವಿರಾರು ಜನರು ಸೇರುತ್ತಿದ್ದಾರೆ. ಇದನ್ನು ಬಿಜೆಪಿಗರು ಸಹಿಸಿಕೊಳ್ಳುತ್ತಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಬ್ರಿಗೇಡ್ ಯಾದಗಿರಿ ಜಿಲ್ಲಾಧ್ಯಕ್ಷರಾದ ಬಸವರಾಜ ಅತ್ನೂರು ಮಾತನಾಡಿ, ಪ್ರಸ್ತುತ ರಾಜ್ಯದಲ್ಲಿರುವ ಬಿಜೆಪಿ ಸರಕಾರದಿಂದ ಜನ ಬೇಸತ್ತಿದ್ದಾರೆ.ಭ್ರಷ್ಟಾಚಾರ ಹಗರಣಗಳಿಂದ ಕೂಡಿದ ಸರ್ಕಾರದಿಂದ ಜನ ರೋಸಿ ಹೋಗಿದ್ದಾರೆ.ಮುಂದಿನ ದಿನಗಳಲ್ಲಿ  ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *