ಬಳ್ಳಾರಿ : ಹಾಸನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಚಿವರಾದ ಅಶ್ವತ ನಾರಾಯಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟಿಪ್ಪುವಿನ ಹಾಗೆ ಒಡೆದು ಹಾಕಬೇಕು ಎಂದು ಹೇಳಿಕೆ ನೀಡಿರುವ ವಿರುದ್ಧ ರಾಜ್ಯ ಕಾಂಗ್ರೆಸ್ ವಕ್ತಾರರು ಮತ್ತು ಕರ್ನಾಟಕ ಪ್ರದೇಶ ರಾಜ್ಯ ಯುವ ಕುರುಬರ ಸಂಘದ ರಾಜ್ಯಾಧ್ಯಕ್ಷರಾದ ಬಿಎಮ್ ಪಾಟೀಲ್ ಕೆಂಡ ಮಂಡಲವಾಗಿದ್ದಾರೆ.ಮುಂದಿನ ದಿನಮಾನಗಳಲ್ಲಿ ಸಂಘಟನೆ ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ಉಗ್ರಹೋರಾಟ ಮಾಡಲಾಗುವುದು ಎಂದರು.
ಬಿಜೆಪಿ ಪಕ್ಷ ಚುನಾವಣೆ ಹೊಸ್ತಿಲಲ್ಲಿ ಕೋಮು ಗಲಭೆಗೆ ಪ್ರೋತ್ಸಾಹ ನೀಡುತ್ತಿದೆ. ಮಾಜಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರನ್ನು ಟಚ್ ಮಾಡಿ ನೋಡಿ, ಪರಸ್ಥಿತಿ ಹೇಗಿರುತ್ತದೆ ಎನ್ನುವುದರ ಬಗ್ಗೆ ತೋರಿಸಿ ಕೊಡುತ್ತೇವೆ ಎಂದು ಕಿಡಿಕಾರಿದರು.
ಮೊದಲು ರಾಜ್ಯದ ಅಭಿವೃದ್ಧಿ ಬಗ್ಗೆ ಮಾತನಾಡಲಿ.40% ಹಗರಣದ ಮರಿಚಿಕೆ ಮಾಡಲಿಕ್ಕಾಗಿ ಜನರನ್ನು ಪರಿವರ್ತನೆ ಮಾಡುತ್ತಿದ್ದಾರೆ.ಇದು ಬಿಜೆಪಿಯ ಸಂಸ್ಕೃತಿಯನ್ನು ಹೊರಿಸುತ್ತಿದೆ. ಇಡೀ ರಾಜ್ಯವನ್ನು ಲೂಟಿ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸೋಲುತ್ತೇವೆ ಎನ್ನುವ ಭಯದಿಂದ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಿ ಜನರನ್ನು ಭಯಪಡಿಸುತ್ತಿದ್ದಾರೆ. ಇದರಿಂದ ಗೆಲ್ಲುತ್ತೇವೆ ಎನ್ನುವ ಭ್ರಮೆಯಲ್ಲಿದ್ದಾರೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ.ಬಿಜೆಪಿಯವರು ಸಿದ್ದರಾಮಯ್ಯನವರನ್ನೆ ಟಾರ್ಗೆಟ್ ಮಾಡುತ್ತಿದ್ದಾರೆ.ಬಿಜೆಪಿಯವರ ಕನಸಿನಲ್ಲಿ ಸಿದ್ದರಾಮಯ್ಯನವರೆ ಕಾಣಿಸುತ್ತಿದ್ದಾರೆ.ಅವರಿಗೆ ನಿದ್ದೆ ಬರುತ್ತಿಲ್ಲ.ಅದಕ್ಕಾಗಿ ಈ ರೀತಿಯ ಪ್ರಚೋದನಕಾರಿ ಭಾಷಣ ಮಾಡುತ್ತಾರೆ.ಇದರ ವಿರುದ್ಧ ಹೋರಾಟ ನಡೆಸಲಾಗುವುದು. ಒಬ್ಬ ಹಿಂದುಳಿದ ನಾಯಕನ ಏಳಿಗೆಯನ್ನು ಸಹಿಸದ ಬಿಜೆಪಿಯವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದರ ಬಗ್ಗೆ ಸರಕಾರ ಮೌನ ವಹಿಸಿರುವುದು ದುರದೃಷ್ಟಕರ ಎಂದು ಕಿಡಿಕಾರಿದರು.ತಕ್ಷಣವೇ ಅಶ್ವಥನಾರಾಯಣವರ ರಾಜೀನಾಮೆಯನ್ನು ಮುಖ್ಯಮಂತ್ರಿಗಳು ಪಡೆಯಬೇಕು. ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು.ಇಲ್ಲದಿದ್ದರೆ ಸಂಘಟನೆ ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.