ಸಚಿವ ಅಶ್ವಥ್ ನಾರಾಯಣರಿಂದ ಹೊಡಿ ಬಡಿ ಹೇಳಿಕೆ ಸಿದ್ದರಾಮಯ್ಯನವರಿಗೆ ಕ್ಷಮಿಯಾಚಿಸಬೇಕು 

ಬೆಂಗಳೂರು : ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು ಎಂದು ಟಿಪ್ಪುವಿಗೆ ಹೋಲಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಆಶ್ವಥ್ ನಾರಾಯಣ ವಿವಾದಾತ್ಮಕ ಹೇಳಿಕೆ ಹಿಂಪಡೆದು ಕ್ಷಮಿಯಾಚಿಸಬೇಕು ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಗಳು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಅಯ್ಯಪ್ಪಗೌಡ ಗಬ್ಬೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಾ.ಆಶ್ವಥ್ ನಾರಾಯಣ ಅವರು ಸಚಿವರಾಗಿ ಜವಾಬ್ಬಾರಿ ಸ್ಥಾನದಲ್ಲಿದ್ದು ಹಗುರವಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರು ಸಿದ್ದರಾಮಯ್ಯನವರ ಬಗ್ಗೆ ಈ ರೀತಿ ಹೇಳಿಕೆ ನೀಡಿದರೆ ಜನ ಸಾಮಾನ್ಯರ ಗತಿಯೇನು ? ಎಂಬ ಪ್ರಶ್ನೆ ಗ್ರಾಮೀಣ ಪ್ರದೇಶಗಳಲ್ಲಿನ ಹಳ್ಳಿಯ ಜನರು ನಮ್ಮ ಗತಿಯೇನು ಎಂದು ಚರ್ಚೆ ಮಾಡುತ್ತಿದ್ದಾರೆ ಎಂದರು.

ಸಿದ್ಧರಾಮಯ್ಯನವರು ಮನುಷ್ಯತ್ವ ಇರುವ ಮಾಜಿ ಸಿಎಂ. ರಾಜ್ಯದ ಜನಪ್ರಿಯ ನಾಯಕರು. ಅವರು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ ಜೈನ್ ಸೇರಿದಂತೆ ಎಲ್ಲ ಧರ್ಮದವರನ್ನೂ ಪ್ರೀತಿಸುತ್ತಾರೆ. ಸಿದ್ದರಾಮಯ್ಯ ಅವರ ಬಗ್ಗೆ ನಿಮಗೆ ಗೊತ್ತಿಲ್ಲದಿದ್ದರೆ ತಿಳಿದುಕೊಳ್ಳಿ ಎಂದು ಕಿಡಿಕಾರಿದರು.

‘ಟಿಪ್ಪು ಸುಲ್ತಾನ್, ಸೇವಾಲಾಲ್, ಸಂಗೊಳ್ಳಿ ರಾಯಣ್ಣ, ಚನ್ನಮ್ಮ, ಬಸವಣ್ಣ ವಾಲ್ಮೀಕಿ ಜಯಂತಿಯನ್ನು ಆಚರಿಸುವಂತೆ ಜಾರಿಗೆ ತಂದರು.
ಸಿದ್ದರಾಮಯ್ಯನವರನ್ನು ಟಿಪ್ಪುವನ್ನು ಹೊಡೆದು ಹಾಗೆ ಹೊಡೆಯಬೇಕು ಎಂದು ಹೇಳಿರುವುದು ಖಂಡನೀಯ.ತಮ್ಮ ಹೇಳಿಕೆ ಹಿಂಪಡೆದು ಕ್ಷಮಿಯಾಚಿಸಬೇಕು. ಇಲ್ಲವಾದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

About The Author