ಗೋಗಿ ಪೇಠ ಮತ್ತು ಮಂಡಗಳ್ಳಿಯಲ್ಲಿ ಬಿಜೆಪಿ ಭರ್ಜರಿ ಪ್ರಚಾರ

ಶಹಾಪುರ :  ಇಂದು ಶಹಾಪುರ ಮತಕ್ಷೇತ್ರದ ಮಂಡಗಳ್ಳಿ ಮತ್ತು ಗೋಗಿ ಪೇಠದಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಅಮೀನರಡ್ಡಿ ಯಾಳಗಿ ಹಾಗೂ ಬಿ ಜೆ ಪಿ ಹಿರಿಯ ಮುಖಂಡರಾದ  ಬಸವರಾಜಪ್ಪಗೌಡ ವಿಭೂತಿಹಳ್ಳಿ ಅವರು ಭೇಟಿ ನೀಡಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು.

ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಬಿ ಜೆ‌ ಪಿ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಬಿ ಜೆ ಪಿಯನ್ನು ಪ್ರಚಂಡ ಬಹುಮತದಿಂದ ಆರಿಸಿ ರಾಜ್ಯದಲ್ಲಿ ಮತ್ತೊಮ್ಮೆ ಡಬಲ್‌ ಇಂಜಿನ್ ಸರ್ಕಾರ ರೂಪಿಸಬೇಕೆಂದು ಹಿರಿಯ ಮುಖಂಡರಾದ ಬಸವರಾಜಪ್ಪಗೌಡ ವಿಭೂತಿಹಳ್ಳಿ ಅವರು ಅಭ್ಯರ್ಥಿಯ ಪರವಾಗಿ ಮತಯಾಚಿಸಿದರು

ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು, ಗ್ರಾಮದ ಹಿರಿಯರು ಹಾಗೂ ಸಾರ್ವಜನಿಕರು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author