ಕ್ಷೇತ್ರದ ಸೇವೆ ಮಾಡಲು ಮತ್ತೊಂದು ಅವಕಾಶ ಕೊಡಿ ದರ್ಶನಾಪುರ ಮನವಿ

ಶಹಾಪುರ : ನನಗೆ ನೀಡಿದ ಐದು ವರ್ಷದ ಆಡಳಿತದಲ್ಲಿ ಶಹಪುರ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ನಗರದಲ್ಲಿ ಶಾಶ್ವತ ಕುಡಿಯುವ ನೀರು ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಜೆಜೆಎಮ್ ಕಾಮಗಾರಿ ವಸತಿ ವ್ಯವಸ್ಥೆ ಸಿಸಿ ರಸ್ತೆ ಸಮುದಾಯ ಭವನ  ಶೈಕ್ಷಣಿಕ ಅಭಿವೃದ್ಧಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಮುಂದಿನ ಐದು ವರ್ಷಗಳಲ್ಲಿ ನನಗೆ ನಿಮ್ಮ ಸೇವೆ ಮಾಡುವ ಅವಕಾಶ ಕಲ್ಪಿಸಿ ಕೊಡಿ ಎಂದು ಶಾಸಕ ಶರಣಬಸಪ್ಪ ಗೌಡ ದರ್ಶನಪುರ ಹೇಳಿದರು.

ತಾಲೂಕಿನ ಗೋಗಿಪೇಠ ತಿಪ್ಪನಟಗಿ ಗೌಡಗೇರಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮತದಾರರ ಜೊತೆಗೆ ಮಾತನಾಡುತ್ತಾ ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆಯಬೇಕಿದೆ. ದೀನದಲಿತರ ಬಡವರ ಪರ ಇರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

About The Author