ರೆಡ್ಡಿ ಸಮಾಜಕ್ಕೆ ಸಚಿವ ಸ್ಥಾನ ನೀಡುವಂತೆ ಸಂಜೀವ ರೆಡ್ಡಿ ಮನವಿ

ವಡಗೇರಾ : ರೆಡ್ಡಿ ಸಮಾಜದ ಏಳಿಗೆ ಹಾಗು ಸಮಾಜದಲ್ಲಿ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ರೆಡ್ಡಿ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಹೆಚ್ಚಿನ ಸಚಿವ ಸ್ಥಾನವನ್ನು ನೀಡಬೇಕು. ಸಮಾಜವು ಕಾಂಗ್ರೆಸ್ ಪಕ್ಷದ ಪರವಾಗಿ ಮೊದಲಿನಿಂದಲೂ ಬೆಂಬಲಿಸುತ್ತ ಬಂದಿದೆ ಎಂದು ಸಂಜೀವ್ ಐರೆಡ್ಡಿ ಬೆಂಡೆಬೆಂಬಳಿ ಆಗ್ರಹಿಸಿದರು.

ಈ ಬಾರಿಯೂ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹಗಲಿರಳು ದುಡಿದು, ಹೆಚ್ಚಿನ ಸ್ಥಾನ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಮಾಜಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿಕೆ. ಶಿವಕುಮಾರ ಮತ್ತು ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *