ಸಿದ್ದರಾಮಯ್ಯ ಸಿಎಂ,ಡಿಕೆ ಶಿವಕುಮಾರ್ ಡಿಸಿಎಂ  ಬಿ ಎಂ ಪಾಟೀಲ್ ಹರ್ಷ

ವಡಗೇರಾ : ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಐದು ವರ್ಷಗಳ ಕಾಲ ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಗಳನ್ನಾಗಿ, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದು ಹರ್ಷ ತಂದಿದೆ ಎಂದು ಕೆಪಿಸಿಸಿ ವಕ್ತಾರರಾದ ಬಿಎಮ್ ಪಾಟೀಲ್ ಹೇಳಿದರು.

ಸಂತೋಷ್ ಲಾಡ್ ಗೆ ಸಚಿವ ಸ್ಥಾನ ನೀಡಲು ಮನವಿ. ಕಲಘಟಗಿ ಕ್ಷೇತ್ರದಿಂದ ಸಂತೋಷ್ ಲಾಡ್ ಶಾಸಕರಾಗಿ ಆಯ್ಕೆಯಾಗಿದ್ದು ಅವರಿಗೆ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು. ಈ ಹಿಂದೆ ಸಂತೋಷ ಲಾಡ್ ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಆದ್ದರಿಂದ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೆಪಿಸಿಸಿಗೆ ಮತ್ತು ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು.

Leave a Reply

Your email address will not be published. Required fields are marked *