ಐದು ಗ್ಯಾರೆಂಟಿಗಳನ್ನು ಘೋಷಿಸಿದ ಕಾಂಗ್ರೆಸ್ ಸರಕಾರ ಹರ್ಷ ವ್ಯಕ್ತಪಡಿಸಿದ ಗಣ್ಯರು

ಯಾದಗಿರಿ : ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಅದನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರಲಾಗಿದ್ದು, ರಾಜ್ಯದ ಜನತೆ ಹರ್ಷ ಪಡುವಂತಹದು ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ನಿಖಿಲ್ ಶಂಕರ್ ಹರ್ಷ ವ್ಯಕ್ತಪಡಿಸಿದರು.
****
 ಯಾದಗಿರಿ ಜಿಲ್ಲಾ ವೈದ್ಯಕ ಘಟಕದ ಅಧ್ಯಕ್ಷರಾದ ಡಾ. ಕೃಷ್ಣಮೂರ್ತಿ ಮಾತನಾಡಿ,ಬಿಪಿಎಲ್ ಕಾರ್ಡ್ದಾರರಿಗೆ ಪ್ರತಿ ಒಬ್ಬರಿಗೆ 10 ಕೆಜಿ ಅಕ್ಕಿ ಉಚಿತ, ಮಹಿಳೆಯರಿಗೆ ಬಸ್ಪಾಸ್ ಉಚಿತ, ಪದವೀಧರರಿಗೆ ಮೂರು ಸಾವಿರ ರೂಪಾಯಿ ಸೇರಿದಂತೆ 200 ಯೂನಿಟ್ ಉಚಿತವಾಗಿ ಘೋಷಣೆ ಮಾಡಲಾಗಿದೆ.ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ.ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ನೊಂದವರ ಶೋಷಿತರ ಪರ ನಿಲ್ಲಲಿದೆ.ಇದರಲ್ಲಿ ಯಾವುದೇ ಅನುಮಾನ ಪಡುವ ಅಗತ್ಯವಿಲ್ಲ ಎಂದರು.
****
ಸಿದ್ದರಾಮಯ್ಯ ಬ್ರಿಗೇಡ್ ಜಿಲ್ಲಾಧ್ಯಕ್ಷರಾದ ಬಸವರಾಜ ಅತ್ನೂರು ಮಾತನಾಡಿ,ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ  ಬಿಜೆಪಿಯವರು ಸಹಿಸಿಕೊಳ್ಳಲಾಗುತ್ತಿಲ್ಲ.ಕಳೆದ ಬಾರಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗ ನಿಮ್ಮ  ಪ್ರಣಾಳಿಕೆಗಳನ್ನು ಜಾರಿಗೆ ತಂದಿದ್ದಿರಾ ಎನ್ನುವುದನ್ನು ಪ್ರಶ್ನೆ ಮಾಡಿಕೊಳ್ಳಿ.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಭತ್ತು ವರ್ಷವಾಯಿತು.ಸ್ವಿಜ್ ಬ್ಯಾಂಕಿನಿಂದ ಹಣ ತಂದು ದೇಶದ ಪ್ರತಿಯೊಬ್ಬ ನಾಗರಿಕರ ಬ್ಯಾಂಕ್ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಭರವಸೆ ನೀಡಿದರು.ಕೊಟ್ಟಿದ್ದಿರಾ ?. ತಮ್ಮ ಎಲ್ಲ ಭರವಸೆಗಳನ್ನು ಮನದಟ್ಟು ಮಾಡಿಕೊಳ್ಳಿ ಎಂದು ವ್ಯಂಗ್ಯವಾಡಿದರು.
****
ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಭಾರತ ನಂಬರ್ ಒಂನ್ ಸ್ಥಾನದಲ್ಲಿದೆ ಎಂದು ಹೇಳುತ್ತಿರುವವರು,70 ವರ್ಷದಲ್ಲಿ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳು ಇಂದು ಭಾರತ ದೇಶ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯವಾಗಿದೆ ಎಂದು ಹೇಳಿದರು.ಮುಂದಿನ ಐದು ವರ್ಷಗಳ ಕಾಲ ರಾಜ್ಯದ ಅಭಿವೃದ್ಧಿ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ಸರ್ಕಾರ ಸುಭದ್ರ ಆಡಳಿತ ನೀಡುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.

About The Author