ಕಾಂಗ್ರೆಸ್ ಗ್ಯಾರಂಟಿಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ ನಿಖಿಲ್ ಶಂಕರ್

ವಡಗೇರಾ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಿದೆ. ನಾವು ಪ್ರಣಾಳಿಕೆಯಲ್ಲಿ ಹೇಳಿರುವಂತೆ ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ಕೊಟ್ಟಿದ್ದೇವೆ. ನುಡಿದಂತೆ ನಡೆದಿದ್ದೇವೆ. ನಮ್ಮ ಗ್ಯಾರಂಟಿಗಳನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗ್ರಾಮೀಣ ಪ್ರದೇಶದಲ್ಲಿನ ಜನತೆಗೆ  ತಲುಪಿಸಬೇಕಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಿಖಿಲ್ ಶಂಕರ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

        ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಲೋಕಸಭೆ ಚುನಾವಣೆಗಳು ಬರಲಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದ ಸರ್ಕಾರ ಅಧಿಕಾರ ಹಿಡಿಯಲು ಕಾರ್ಯಕರ್ತರು ಸಜ್ಜಾಗಬೇಕಿದೆ. ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳ ಬಗ್ಗೆ ಜನರಿಗೆ ಸಂಪೂರ್ಣ ಮಾಹಿತಿ ನೀಡಬೇಕು. ಇಲ್ಲದಿದ್ದರೆ ವಿರೋಧ ಪಕ್ಷದವರು ಯಾಮಾರಿಸುವರು, ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕು. ನಾವು ಕೊಟ್ಟ ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಥಾವತ್ತಾಗಿ ಜಾರಿಗೆ ತಂದಿದ್ದಾರೆ. ಅದನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *