ರಾಜ್ಯದ ನಾಲ್ಕು ನಿಗಮಗಳ ಅಧ್ಯಕ್ಷರಾಗಿ ಸಚಿವ ಶರಣಬಸಪ್ಪಗೌಡ ದರ್ಶನಪುರ ನೇಮಕ

ಶಹಾಪುರ : ರಾಜ್ಯ ಸರ್ಕಾರ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವರಾದ ಶರಣಬಸಪ್ಪಗೌಡ ದರ್ಶನಪುರ ಅವರನ್ನು ನಾಲ್ಕು ನಿಗಮಗಳ ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದೆ. ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.