ಕಲ್ಯಾಣ ಕರ್ನಾಟಕ ವಿಭಾಗದ ಯಾದಗಿರಿ ಜಿಲ್ಲೆಯಲ್ಲಿ ಸರಕಾರಿ ಹೋಮಿಯೋಪತಿ ಕಾಲೇಜು ಸ್ಥಾಪನೆಗೆ ಮನವಿ

ವಡಗೇರಾ :ಕಲ್ಯಾಣ ಕರ್ನಾಟಕ ವಿಭಾಗದ ಯಾದಗಿರಿ ಜಿಲ್ಲೆಯಲ್ಲಿ ಸರಕಾರಿ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಯಾದಗಿರಿ ಜಿಲ್ಲಾ ವೈದ್ಯಕೀಯ ಘಟಕದ ಜಿಲ್ಲಾಧ್ಯಕ್ಷರಾದ ಡಾ. ಕೃಷ್ಣಮೂರ್ತಿಯವರು ಮನವಿ ಮಾಡಿದರು.

****
 ಈ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು,ಕರ್ನಾಟಕ ರಾಜ್ಯದಲ್ಲಿಯೇ ಬೆಂಗಳೂರು ನಗರದಲ್ಲಿ ಒಂದೇ ಒಂದು ಸರಕಾರಿ ಹೋಮಿಯೋಪತಿ ಕಾಲೇಜು ಮತ್ತು ಆಸ್ಪತ್ರೆ ಇದ್ದು, ಇದನ್ನು ವಿಸ್ತರಿಸಲು ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾದಗಿರಿ ಜಿಲ್ಲೆಗೆ ಮತ್ತೊಂದು ಸರಕಾರಿ ಹೋಮಿಯೋಪತಿ  ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವಂತೆ ಮನವಿ ಮಾಡಲಾಗಿದೆ.
****
ಹೋಮಿಯೋಪತಿ ಔಷಧಿಗಳು ದೀರ್ಘಕಾಲದ ಕಾಯಿಲೆಗಳನ್ನು ಶಾಶ್ವತವಾಗಿ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಗುಣಪಡಿಸುತ್ತವೆ. ರಾಜ್ಯದಲ್ಲಿ ಹೊಸ ಹೋಮಿಯೋಪತಿ ಕಾಲೇಜು ಸ್ಥಾಪನೆಯಿಂದ ಹೋಮಿಯೋಪತಿ ಔಷಧಿಗಳನ್ನು ರಾಜ್ಯಾದ್ಯಂತ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಮತ್ತು ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸಲು ಅನುಕೂಲವಾಗುತ್ತದೆ.
****
ವಿಶೇಷವಾಗಿ ಕಲ್ಯಾಣ ಕರ್ನಾಟಕದಲ್ಲಿ ಸರಕಾರಿ ಹೋಮಿಯೋಪತಿ ಕಾಲೇಜು ಮತ್ತು ಆಸ್ಪತ್ರೆಯ ಅವಶ್ಯಕತೆ ಇದ್ದು ಯಾದಗಿರಿ ಜಿಲ್ಲೆಗೆ ಆಸ್ಪತ್ರೆ ಒದಗಿಸಿ ಕೊಡುವಂತೆ ಮನವಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಕಲ್ಬುರ್ಗಿ ವೈದ್ಯಕೀಯ ಘಟಕದ ಜಿಲ್ಲಾಧ್ಯಕ್ಷರಾದ ಡಾ. ಅರವಿಂದ್ ಕಟ್ಟಿ ಹಾಗೂ ಡಾ.ಮಲ್ಲಿಕಾರ್ಜುನ ಗೌಡ ಪಾಟೀಲ್ ಉಪಸ್ಥಿತರಿದ್ದರು.

About The Author