ಮಾಡರ್ನ ಡಿಗ್ರಿ ಕಾಲೇಜಿಗೆ ಸಚಿವರ ಭೇಟಿ  ಕಾಮಗಾರಿ ಪರಿಶೀಲನೆ

Yadagiri, ಶಹಾಪೂರ : ಜಿಲ್ಲೆಯಲ್ಲಿ ಅತ್ಯಂತ ಸುಸಜ್ಜಿತವಾದ ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿ ಬರುವ ಮಾಡರ್ನ್ ಡಿಗ್ರಿ ಕಾಲೇಜಿನ ಕಾಮಗಾರಿಯು ಇನ್ನೆರಡು ತಿಂಗಳಲ್ಲಿ ಮುಗಿಯಲಿದೆ ಎಂದು ಸಣ್ಣ ಕೈಗಾರಿಕೆ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು. ನಗರದ ಮಾಡರ್ನ ಪದವಿ ಕಾಲೇಜಿನ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಬಿಸಿಎ ಮತ್ತು ಬಿಕಾಂ ಗೆ ಕೇಂದ್ರ ಅನುಮತಿ ನೀಡಿದೆ.ಬಿಎ,ಬಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.12 ಕೋಟಿ ವೆಚ್ಚದ ಕಾಲೇಜಿನಲ್ಲಿ ಮಹಿಳಾ ಮತ್ತು ಪುರುಷರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.ಪ್ರಸ್ತುತ ವರ್ಷದ ವಿದ್ಯಾರ್ಥಿಗಳಿಗೆ ದಾಖಲಾತಿ ಮಾಡಲಾಗಿದ್ದು, ಶೈಕ್ಷಣಿಕ ದೃಷ್ಟಿಯಿಂದ 60 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲಾಗುವುದು.ಪ್ರಸ್ತುತ ವರ್ಷದ ವಿದ್ಯಾರ್ಥಿಗಳಿಗೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗಕ್ಕಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ವಸಂತಕುಮಾರ್ ಸರಪುರಕರ್,ಪದವಿ ಕಾಲೇಜಿನ ಪ್ರಾಚಾರ್ಯರಾದ ಚೆನ್ನಾರೆಡ್ಡಿ,ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಾಂತುಪಾಟೀಲ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *