ಶಾಸಕರು ನಡೆ ಹಳ್ಳಿ ಕಡೆ : ಹಲವು ಗ್ರಾಮಗಳಿಗೆ ಭೇಟಿ ನೀಡಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತನ್ನೂರು

ವಡಗೇರಾ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದು ತಿಂಗಳಾಯಿತು. ಈಗಾಗಲೇ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಶಾಸಕರು ಪ್ರತಿ ಹಳ್ಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಪರಿಹರಿಸುತ್ತಿದ್ದಾರೆ. ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಕ್ಷೇತ್ರದ ಪ್ರತಿಯೊಬ್ಬರಿಗೂ ತಲುಪುವಂತೆ ಸಹಕರಿಸುತ್ತಿದ್ದಾರೆ. ಯಾದಗಿರಿ ಕ್ಷೇತ್ರದ ಶಾಸಕರಾದ ಚೆನ್ನಾರೆಡ್ಡಿ ತುನ್ನೂರು ಕಾಡಂಗೇರಾ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿದರು. ಪಕ್ಕದಲ್ಲಿನ ಅಧಿಕಾರಿಗಳಿಗೆ ತಕ್ಷಣವೇ ಪರಿಹರಿಸಿ ಕೊಡುವಂತೆ ಸ್ಥಳದಲ್ಲಿಯೇ ಸೂಚಿಸಿದರು. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಷಣ್ಮುಖಪ್ಪ ಗೊಂಗಡಿ ಪಶುಆಸ್ಪತ್ರೆ ಶಹಾಪುರ, ಬಸವರಾಜ ಸಜ್ಜನ್ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯಿತಿ ವಡಗೇರಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮರೆಪ್ಪ ಬಿಳಾರ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

About The Author