ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಬೇಕು

ಎ.ಬಿ.ರಾಜ್

ವಡಗೇರಾ : ಐವತ್ತು ವರ್ಷಕ್ಕೂ ಹೆಚ್ಚು ದಿನಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ರಾಜಕೀಯ ಹಾಗುಹೋಗುಗಳನ್ನು ಕಂಡ ಧೀಮಂತ ನಾಯಕ ಮಲ್ಲಿಕಾರ್ಜುನ ಖರ್ಗೆಯವರು. ಗುರುಮಿಟ್ಕಲ್ ಕ್ಷೇತ್ರದಿಂದ ರಾಜಕೀಯ ಆರಂಭಿಸಿದ ಅವರು ಸತತ ಒಂಬತ್ತು ಬಾರಿ ಶಾಸಕರಾಗಿ ಆಯ್ಕೆಯಾಗಿ, ರಾಜ್ಯದಲ್ಲಿ ಹಲವಾರು ಇಲಾಖೆಗಳಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ.ಸಂಸತ್ ಸದಸ್ಯರಾಗಿ ಕೇಂದ್ರ ಮಂತ್ರಿಮಂಡಲದಲ್ಲಿ ಕೇಂದ್ರ ಸಚಿವರಾಗಿ ರಾಜ್ಯ ಮತ್ತು ಕೇಂದ್ರದಲ್ಲಿ ವಿರೋಧ ಪಕ್ಷದ ನಾಯಕರಾಗಿ ಅದ್ಭುತ ಸೇವೆ ಮಾಡಿದ್ದಾರೆ.ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅದ್ಭುತ ವಾಕ್ಚಾತುರ್ಯವನ್ನು ಹೊಂದಿದ ನಾಯಕರು. ಆದರು ಕೂಡ ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಲು ಸಾಧ್ಯವಾಗಿಲ್ಲ!
ಕಾಂಗ್ರೆಸ್ ಪಕ್ಷದ ಕಟ್ಟಾಳು, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಯಾವತ್ತೂ ಬದ್ಧ. ಹೈಕಮಾಂಡ್ ಹಾಕಿದ ಲಕ್ಷ್ಮಣ ರೇಖೆಯನ್ನು ಯಾವತ್ತು ದಾಟಿಲ್ಲ. ಅಂತಹ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಿಲ್ಲ ಎನ್ನುವುದೇ ಬೇಸರದ ಸಂಗತಿ.

ತಪ್ಪಿದ ಮುಖ್ಯಮಂತ್ರಿ ಸ್ಥಾನ 

ರಾಜ್ಯದಲ್ಲಿ ಹಲವು ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಿಲ್ಲ. ವೀರೇಂದ್ರ ಪಾಟೀಲ್, ಎಸ್ಎಂ ಕೃಷ್ಣ, ಧರ್ಮಸಿಂಗ್, ಸಿದ್ದರಾಮಯ್ಯ ಇವರು ಮುಖ್ಯಮಂತ್ರಿಯಾಗುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದೆ.ಆದರೆ ಹೈಕಮಾಂಡ್ ಮನಸ್ಸು ಮಾಡಿದರೆ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡಬಹುದಿತ್ತು.
2023ರಲ್ಲಿಯೂ ಮಲ್ಲಿಕಾರ್ಜುನ ಖರ್ಗೆ
ಯವರು ಸಿಎಂ ಆದರೆ ನನ್ನದೇನು ಅಭ್ಯಂತರವಿಲ್ಲ. ಅವರ ಕೈ ಕೆಳಗೆ ನಾನು ಕೆಲಸ ಮಾಡಲು ಸಿದ್ಧ ಎಂದಿದ್ದ ಡಿಕೆ ಶಿವಕುಮಾರ್ ರವರ ಪ್ರಕಾರ ಮಲ್ಲಿಕಾರ್ಜುನ ಖರ್ಗೆಯವರನ್ನು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿಯನ್ನಾಗಿ ಮಾಡಬಹುದು.
ಹಲವು ಬಾರಿ ಕಾಂಗ್ರೆಸ್ ಪಕ್ಷದ ವಲಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಪದೇ ಪದೇ ಕೇಳಿ ಬರುತ್ತಿದೆ. ಆದರೆ ಖರ್ಗೆಯವರು ಇದನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ನನ್ನನ್ನು ಒಬ್ಬ ದಲಿತ ನಾಯಕನೆಂದು ಗುರುತಿಸಬೇಡಿ. ಕಾಂಗ್ರೆಸ್ ಪಕ್ಷದಲ್ಲಿ ನನ್ನ ಸೇವೆ ಗುರುತಿಸಿ ನನಗೆ ಪದವಿ ಕೊಡಿ ಎಂದು ಪದೇಪದೇ ಹೇಳುತ್ತಿರುತ್ತಾರೆ.ಹೌದು ಇದು ಎಲ್ಲರಿಗೂ ಬರುವುದಿಲ್ಲ.ದಲಿತ ಸಿಎಂ ಪಟ್ಟ ನನಗೆ ಬೇಡ. ರಾಜ್ಯದ ಎಲ್ಲಾ ಜನಾಂಗದ ಮುಖ್ಯಮಂತ್ರಿ ಆಗಬೇಕು ಎನ್ನುತ್ತಾರೆ ಮಲ್ಲಿಕಾರ್ಜುನ ಖರ್ಗೆಯವರು.
ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರ ಪಂಜಾಬ್ ರಾಜ್ಯಗಳಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಿಲ್ಲವೇ, ಅದೇ ರೀತಿಯಾಗಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರದೇ ನೀಡಿದ ಕೊಡುಗೆ ದೊಡ್ಡದಿದೆ.ಪ್ರಸ್ತುತ 24 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಕಟ್ಟಾಳು, ಅವರ ಅನುಭವ ಅಪಾರವಾದದ್ದು.80 ವರ್ಷ ವಯಸ್ಸಾಗಿದೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಪ್ರಸ್ತುತದಲ್ಲಿ ಐದು ವರ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಕಲ್ಯಾಣ ಕರ್ನಾಟಕದ ಜನ ಒಂದು ಬಾರಿ ಮುಖ್ಯಮಂತ್ರಿಯಾಗುವ ಕನಸನ್ನು ಕಂಡಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಬೇಕಿದೆ.

About The Author