ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ : ಸುಳ್ಳು ಭರವಸೆ ಮತ್ತು ಕುತಂತ್ರದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ : ನಳಿನಕುಮಾರ ಕಟೀಲ್

ಶಹಾಪೂರ : ರಾಜ್ಯದಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಕುತಂತ್ರದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನಕುಮಾರ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ಮೊರಟಗಿ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು 45 ದಿನಗಳು ಕಳೆದಿಲ್ಲ. ರಾಜ್ಯಾದ್ಯಂತ ಸಾಮಾನ್ಯ ಜನರು ಸರಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಇತಿಹಾಸದಲ್ಲಿ ಇದೆ ಮೊದಲ ಸಲ ಎಂದು ಹೇಳಿದರು.ಗೃಹ ಜ್ಯೋತಿಯಿಂದ ಕೆಇಬಿ ನಷ್ಟವಾದರೆ, ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ನೆಲಕಚ್ಚಿ 1.40 ಲಕ್ಷ ನೌಕರರು ಬೀದಿಗೆ ಬರಲಿದ್ದಾರೆ ಎಂದು ಸರಕಾರದ ವಿರುದ್ಧ ಕಿಡಿಕಾರಿದರು.

ರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 9 ವರ್ಷದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಬೇಕು. 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಬೇಕಿದೆ. 9 ವರ್ಷದ ಕೇಂದ್ರದ ಆಡಳಿತ ಭ್ರಷ್ಟಾಚಾರ ಮುಕ್ತವಾಗಿದೆ. 60 ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿತ್ತು.ನರೇಂದ್ರ ಮೋದಿಯವರ ಯೋಜನೆಗಳು ಶಾಶ್ವತ ಯೋಜನೆಗಳಾಗಿವೆ. ಶಿಕ್ಷಣ ಆರೋಗ್ಯಕ್ಕೆ ಮಹತ್ವ ಕೊಡಲಾಗಿದೆ.ದೇಶದಲ್ಲಿ 12 ಕೋಟಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಎರಡು ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ. ಬಡವರಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡಲಾಗಿದೆ. ಆಯುಷ್ಮಾನ್ ಯೋಜನೆಯಡಿ ಐದು ಲಕ್ಷ ವಿಮೆ ನೀಡಲಾಗಿದೆ. ಸ್ವಾತಂತ್ರ್ಯ ಬಂದ ನಂತರ 18,000 ಹಳ್ಳಿಗಳಿಗೆ ದೀನ ದಯಾಳ್ ಉಪಾಧ್ಯಾಯ ಯೋಜನೆ ಅಡಿ ವಿದ್ಯುತ್ ಕಲ್ಪಿಸಲಾಗಿದೆ. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ 40 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ. ದೇಶದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ವೆಂಟಿಲೇಟರ್  ವ್ಯವಸ್ಥೆ ಕಲ್ಪಿಸಲಾಗಿದೆ. ಕರೋನ ಸಂದರ್ಭದಲ್ಲಿ 130 ಕೋಟಿ ಜನರಿಗೆ ಉಚಿತವಾಗಿ ಎರಡು ಬಾರಿ ವ್ಯಾಕ್ಸಿನ್ ಕೊಡಲಾಗಿದೆ. ಇಂತಹ ಕೇಂದ್ರ ಸರ್ಕಾರದ ಯೋಜನೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸಿ. ಮುಂದೆ ಬರುವ ಸ್ಥಳೀಯ ಮತ್ತು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.ರಾಜಕುಮಾರ ತೆಲ್ಕೂರ ಮಾಜಿ ಶಾಸಕರು, ಶರಣಭೂಪಾಲರೆಡ್ಡಿ ಬಿಜೆಪಿ ಜಿಲ್ಲಾಧ್ಯಕ್ಷರು, ಲಲಿತ ಅನಪುರ,ಅಮೀನ್ ರೆಡ್ಡಿ ಯಾಳಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಮರನಾಥ ಪಾಟೀಲ್ ಯಾದಗಿರಿ ಬಿಜೆಪಿ ಉಸ್ತುವಾರಿಗಳು,ಡಾ.ಚಂದ್ರಶೇಖರ ಸುಬೇದಾರ ಬಿಜೆಪಿ ಹಿರಿಯ ಮುಖಂಡರು, ರಾಜುಗೌಡ ಉಕ್ಕಿನಾಳ ಗ್ರಾಮೀಣ ಮಂಡಲ ಅಧ್ಯಕ್ಷರು, ದೇವೇಂದ್ರಪ್ಪ ಕೊನೇರ ನಗರ ಮಂಡಲ ಅಧ್ಯಕ್ಷರು, ಮಲ್ಲಿಕಾರ್ಜುನ ಕಂದಕೂರ ಹಿಂದುಳಿದ ವರ್ಗ ಬಿಜೆಪಿ ಜಿಲ್ಲಾಧ್ಯಕ್ಷರು, ಮಲ್ಲಿಕಾರ್ಜುನ ಚಿಲ್ದಾಳ, ಗುರುಕಾಮ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಬಸವರಾಜಪ್ಪ ವಿಭೂತಿಹಳ್ಳಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಸೇರಿದಂತೆ ನೂರಾರು ಕಾರ್ಯಕರ್ತರು ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ.2024ರಲ್ಲಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗಲಿದ್ದಾರೆ. ಯಾದಗಿರಿಯಲ್ಲಿ ಕೇಂದ್ರ ಸರಕಾರ ಜಲಧಾರ ಯೋಜನೆ ನೀಡಿದ್ದಾರೆ. ರಾಜ್ಯ ಸರ್ಕಾರ ಕೇಂದ್ರ ನೀಡುತ್ತಿದ್ದ 5 ಕೆಜಿ ಅಕ್ಕಿಯನ್ನು ನೀಡುತ್ತಿದೆ ಹೊರತು ರಾಜ್ಯ ಸರ್ಕಾರ ಸ್ವಂತ ಅಕ್ಕಿಗಳನ್ನಲ್ಲ. ಸುಳ್ಳು ಭರವಸೆಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.

 ರಾಜಾ ಅಮರೇಶ ನಾಯಕ ಸಂಸದರು ರಾಯಚೂರು ಲೋಕಸಭಾ ಕ್ಷೇತ್ರ

 

ಉಚಿತ ಗ್ಯಾರಂಟಿಗಳ ಮುಖಾಂತರ ರಾಜ್ಯದಲ್ಲಿ ಕುತಂತ್ರದಿಂದ ಸುಳ್ಳು ಭರವಸೆಗಳನ್ನು ನೀಡಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಜನರು ಪ್ರತಿಭಟನೆಗಳಿದಿದ್ದಾರೆ. ಇನ್ನು ಒಂದು ವರ್ಷದೊಳಗೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳಲಿದೆ.ಲೋಕಸಭೆ ಚುನಾವಣೆ ಜೊತೆಗೆ ರಾಜ್ಯ ವಿಧಾನಸಭೆ ಚುನಾವಣೆ ನಡೆದರೆ ಅಚ್ಚರಿ ಪಡಬೇಕಾಗಿಲ್ಲ.

 

ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ರಾಜ್ಯಾ ಉಪಾಧ್ಯಕ್ಷರು

                                                                                                                                       

 

About The Author