ಗ್ರಾಮೀಣ ಭಾಗದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ:ಹೆಚ್ಚುವರಿ ಬಸ್ ಕಲ್ಪಿಸಲು ಪ್ರತಿಭಟನೆ

ಶಹಾಪುರ: ತಾಲೂಕಿನ ಕನ್ಯಾಕೋಳೂರು ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮದಿಂದ ನಗರಕ್ಕೆ ಶಾಲಾ-ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಕನ್ಯಾಕೋಳೂರು ಗ್ರಾಮಕ್ಕೆ ಹೆಚ್ಚುವರಿ ಬಸ್ ಬಿಡಬೇಕು ಎಂದು ಆಗ್ರಹಿಸಿ ಗ್ರಾಮದಲ್ಲಿ ಬಸ್ ನಿಲ್ಲಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮನವಿ ಪತ್ರ ನೀಡಿದ ವಿದ್ಯಾರ್ಥಿಗಳು ಬೆನಕನಹಳ್ಳಿ,ಕನ್ಯಾಕೋಳೂರು,ಟೋಕಾಪುರ, ಹುಂಡೇಕಲ್, ಕಾಡಂಗೇರಾ ದಿಂದ ವಿದ್ಯಾರ್ಥಿಗಳು ನಗರಕ್ಕೆ ಹೋಗುತ್ತಿದ್ದು, ಹೀಗಾಗಿ ಈಗ ಇರುವ ಬಸ್ ವ್ಯವಸ್ಥೆ ಜೊತೆ ಇನ್ನೊಂದು ಬಸ್ ವ್ಯವಸ್ಥೆ ಕಲ್ಪಿಸಬೇಕು ಮತ್ತು ಕಾಲೇಜು ಹಾಗೂ ಶಾಲಾ ವಿದ್ಯಾರ್ಥಿಗಳ ಸಮಯಕ್ಕೆ ಅನುಕೂಲವಾಗಬೇಕು ಎಂದು ಮನವಿ ಮಾಡಿದರು, ಸಾರಿಗೆ ಘಟಕದ ಅಧಿಕಾರಿಗಳು ಆಗಮಿಸಿ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಇದ್ದರು.

Leave a Reply

Your email address will not be published. Required fields are marked *