ಗ್ರಾಮೀಣ ಭಾಗದಲ್ಲಿ ನಕಲಿ ಮಧ್ಯ ಮಾರಾಟ ತಡೆಗಟ್ಟಲು ಮನವಿ

ಶಹಾಪುರ : ತಾಲೂಕಿನ ಅನೇಕ ಗ್ರಾಮಗಳಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ನಡೆಯುತ್ತಿರುವುದನ್ನು ತಡೆಗಟ್ಟಬೇಕೆಂದು ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘದ ಅಧ್ಯಕ್ಷರಾದ ಮೌನೇಶ್ ಹಳಿಸಗರ ಮನವಿ ಮಾಡಿದರು. ತಹಶೀಲ್ದಾರರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು,
ಶಹಾಪುರ ಮತ್ತು ವಡಗೇರ ತಾಲೂಕಿನ ಹೋಟೆಲು, ಕಿರಾಣಿ ಅಂಗಡಿಗಳಲ್ಲಿ, ಮನೆಗಳಲ್ಲಿ ಅಕ್ರಮವಾಗಿ ಮಧ್ಯವನ್ನು ಸಂಗ್ರಹಿಸಿ ಬೇಕಾಬಿಟ್ಟಿಯಾಗಿ ಹಗಲು ರಾತ್ರಿ ಎನ್ನದೆ ನಿರಂತರವಾಗಿ ಮಧ್ಯ ಮಾರಾಟ ಮಾಡುತ್ತಿದ್ದಾರೆ.ಇದರಿಂದ ಗ್ರಾಮೀಣ ಪ್ರದೇಶದ ಬಡ ಕುಟುಂಬಗಳು ಬೀದಿಗೆ ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು..

Leave a Reply

Your email address will not be published. Required fields are marked *