ಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಶಿಫಾರಸು  ಅಯ್ಯಪ್ಪಗೌಡ ಅಭಿನಂದನೆ ಸಲ್ಲಿಸಿದ ಅಯ್ಯಪ್ಪಗೌಡ

ಬೆಂಗಳೂರು : ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಿರುವುದು ಸಂತೋಷದ ವಿಷಯ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾದ ಅಯ್ಯಪ್ಪಗೌಡ ಗಬ್ಬೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ರಾಜ್ಯಾದ್ಯಂತ ಇರುವ ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ ಎಂದು ತಿಳಿಸಿದರು.

ಮೈಸೂರು, ಚಾಮರಾಜನಗರ ಕೊಡಗು ಜಿಲ್ಲೆಯ ಕೆಲ ಜಿಲ್ಲೆಗಳಲ್ಲಿ ಇದ್ದ ಕಾಡು ಕುರುಬರನ್ನ ಮಾತ್ರ ಎಸ್ಟಿ ಪಂಗಡಕ್ಕೆ ಸೇರಿಸಲಾಗಿತ್ತು.ಈಗ ರಾಜ್ಯಾದ್ಯಂತ ಇರೋ ಕುರುಬ ಸಮುದಾಯವನ್ನ ಎಸ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ರಾಜ್ಯದಲ್ಲಿರುವ ಸಮಸ್ತ ಕುರುಬ ಸಮುದಾಯದ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *