ರಾಯಚೂರು : ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗವು ಅತ್ಯಂತ ಹಿಂದುಳಿದಿದೆ. ಬೆಂಗಳೂರು ಸೇರಿದಂತೆ ದೇಶದ ಇತರ ಪ್ರದೇಶಗಳಿಗೆ ಇಲ್ಲಿನ ಜನ ಕೆಲಸಮಾಡಲು ವಲಸೆ ಹೋಗುತ್ತಿದ್ದಾರೆ. ಅದನ್ನು ತಡೆಯಲು ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆ ಯಾಗಬೇಕೆಂದು ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ನಾಯಕ ಅಧಿವೇಶನದಲ್ಲಿ ಸರಕಾರಕ್ಕೆ ಒತ್ತಾಯಿಸಿದರು.
Video Player
00:00
00:00
ಸಣ್ಣ ಕೈಗಾರಿಕೆ ಸೇರಿದಂತೆ ಇತರ ಕೈಗಾರಿಕೆ ಘಟಕಗಳನ್ನು ಉತ್ತರ ಕರ್ನಾಟಕದಲ್ಲಿ ಸ್ಥಾಪಿಸುವುದರಿಂದ ಇಲ್ಲಿನ ಜನರಿಗೆ ಉದ್ಯೋಗ ಕಲ್ಪಿಸಿದಂತಾಗುತ್ತದೆ ಎಂದು ಹೇಳಿದರು.
ರಾಯಚೂರು ಜಿಲ್ಲೆಯಲ್ಲಿ ಹೊಸದಾಗಿ ಸ್ಥಾಪನೆಯಾದ ರಾಯಚೂರು ವಿಶ್ವವಿದ್ಯಾಲಯಕ್ಕೆ 206 ಕೋಟಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದಷ್ಟು ಬೇಗ ಬಿಡುಗಡೆಗೊಳಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.