ಮಂಜುನಾಥ ಕರಿಗಾರರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ನವಚೇತನ ಕಲಾನಿಕೇತನ ಬೆಂಗಳೂರು ವತಿಯಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಗ್ರಾಮದ ಮಂಜುನಾಥ ಕರಿಗಾರ ರವರಿಗೆ 2022ನೇ ಸಾಲಿನ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದು ಕರ್ನಾಟಕ ನವಚೇತನ ಕಲಾನಿಕೇತನ ಟ್ರಸ್ಟಿನ ಅಧ್ಯಕ್ಷರಾದ ಲೀಲಾವತಿ ಆರ್ ಅಶ್ವತ್ ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದರು.

ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131 ನೇ ಜಯಂತಿ ಅಂಗವಾಗಿ ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣ ಚಾಮರಾಜಪೇಟೆಯಲ್ಲಿ ಸಂಜೆ.5:30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಕೊಡಲಾಗುವುದು ಎಂದು ತಿಳಿಸಿದರು.

ಮಂಜುನಾಥ ಕರಿಗಾರ ಗಬ್ಬೂರಿನ ಗ್ರಾಮ ಪಂಚಾಯತಿಯಲ್ಲಿ ಸುಮಾರು ಹದಿನೈದು ವರ್ಷಗಳಿಂದ ಕರವಸೂಲಿಗಾರನಾಗಿ ಸೇವೆ ಸಲ್ಲಿಸುತ್ತಿದ್ದು, ಗ್ರಾಮದ ಜನರಿಗೆ ಉತ್ತಮ ರೀತಿಯಲ್ಲಿ ಸಾರ್ವಜನಿಕರಿಗೆ ಒಳ್ಳೆಯ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ.ಇವರ ಕಾರ್ಯವನ್ನು ಗುರುತಿಸಿ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *