ಅಯ್ಯಪ್ಪಗೌಡರಿಗೆ ಕುರಿ ಮತ್ತು ಉಣ್ಣೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಗಿರೀಶ್ ಬೆಂಗಳೂರು ಮನವಿ

ಬೆಂಗಳೂರು :- ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವುಗಾಗಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ಅಯ್ಯಪ್ಪಗೌಡ ಗಬ್ಬೂರ ರವರಿಗೆ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ರಾಜ್ಯ ಅಧ್ಯಕ್ಷರಾದ ಡಿಕೆ ಶಿವಕುಮಾರ ಅವರಿಗೆ ಮನವಿ ಮಾಡಿದ್ದಾರೆ.

🖕ಗಿರೀಶ ಬೆಂಗಳೂರು

ಕುರಿಗಳು ಮತ್ತು ಕುರಿಗಾಹಿಗಳ ಹೋರಾಟಗಳಲ್ಲಿ ಭಾಗಿಯಾಗಿ ಹಲವು ಜಿಲ್ಲೆಗಳಲ್ಲಿ ಕುರಿಗಾಹಿಗಳಿಗೆ ಸಂಕಷ್ಟಕ್ಕೆ ಅಯ್ಯಪ್ಪಗೂ ಸ್ಪಂದಿಸಿದ್ದಾರೆ.ಹಲವು ಜಿಲ್ಲೆಗಳಲ್ಲಿ ಕಾರ್ಮಿಕರ ಹೋರಾಟಗಳಲ್ಲಿ ಭಾಗಿಯಾಗಿ ಜನ ಸೇವಕರಾಗಿ,ರೈತರ ಪರವಾಗಿ  ಕೆಲಸ ಮಾಡಿದ್ದಾರೆ. ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಗಳು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿಯಾಗಿ ಕೆಲಸ ಮಾಡುತ್ತಿದ್ದಾರೆ.ರೈತಪರ ಹೋರಾಟಗಳಲ್ಲಿ ಭಾಗಿಯಾಗಿ ಕೆಲಸ ಮಾಡಿದ್ದಾರೆ. ಸಾಮಾಜಿಕ ಜವಾಬ್ದಾರಿಯ ಅನುಭವದ ಅರಿವು ಇರುವುದರ ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಇವರ ಪಾತ್ರ ಬಹು ಮುಖ್ಯವಾಗಿದೆ. ಆದ್ದರಿಂದ ಕುರಿ ನಿಗಮದ ಅಧ್ಯಕ್ಷ ಸ್ಥಾನ ಕೊಡುವುದರಿಂದ ಕುರಿಗಾರರು ಸೇವೆ ಮಾಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.