ಗೃಹಲಕ್ಷ್ಮಿ ಯೋಜನೆಗೆ ಚಾಲನೆ | ಶಾಸಕ ಚನ್ನಾರೆಡ್ಡಿ ತುನ್ನೂರು ಹೇಳಿಕೆ | ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ

yadgiri ವಡಗೇರಾ:ಗೃಹಲಕ್ಷ್ಮಿ ಯೋಜನೆ ಜಾರಿಯಿಂದ ರಾಜ್ಯದಲ್ಲಿನ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅಭಿಪ್ರಾಯ ವ್ಯಕ್ತಪಡಿಸಿದರು.ತಾಲೂಕಿನ ವಡಗೇರಾ ಪಟ್ಟಣದ ಬನದೇಶ್ವರ ರಾಚೋಟೇಶ್ವರ ಕಲ್ಯಾಣ ಮಂಟಪದಲ್ಲಿ  ಹಮ್ಮಿಕೊಂಡಿದ್ದ  ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಭರವಸೆ ನೀಡಿದ್ದ ಐದು ಗ್ಯಾರೆಂಟಿಗಳಲ್ಲಿ ಈಗಾಗಲೇ ನಾಲ್ಕನ್ನು ಸಂಪೂರ್ಣವಾಗಿ ಈಡೇರಿಸಿದ್ದಾರೆ.

ಬಡವರ ಪರ ಯೋಜನೆಗಳನ್ನು  ಜಾರಿಗೆ ತರುವ ಕೆಲಸ ಮಾಡಿದ್ದಾರೆ.ಸಿದ್ದರಾಮಯ್ಯನವರ ತತ್ವದಲ್ಲಿನ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳುವ ಸರಕಾರವಾಗಿದೆ ಎಂದರು.ರಾಜ್ಯದಲ್ಲಿನ ಬಡ ಮಹಿಳೆಯರು ಬಡತನದಿಂದ  ಕಣ್ಣೀರು ಹಾಕುವುದನ್ನು ಅರಿತ ಸರಕಾರ ಮಹಿಳೆಯರ ಕಣ್ಣೀರು ಒರೆಸುವ ಕಾರ್ಯ ಮಾಡುತ್ತಿದೆ.ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ.ನೆರವಾಗಿ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ.ರಾಜ್ಯದ ಜನರ ಕಷ್ಟ ಅರಿತ ಮುಖ್ಯಮಂತ್ರಿಗಳು  ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರ ಉಚಿತ ಬಸ್ ನಲ್ಲಿ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಇದರಿಂದ ಬಸ್ ನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆ ಮೂಲಕ ಬಡವರ ಹೊಟ್ಟೆ ತುಂಬಿಸುವ ಕಾರ್ಯ ಮಾಡುತ್ತಿದೆ.ಅದೆ ರೀತಿ ಬಡವರ ಮನೆ ಬೆಳಗಿಸಲು ಗೃಹ ಜ್ಯೋತಿ ಜಾರಿಗೆ ತಂದಿದೆ ಎಂದರು.ಜಿಲ್ಲೆಯಲ್ಲಿ  2.18 ಲಕ್ಷ ಮಹಿಳಾ ಫಲಾನುಭವಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ  ಇದರಿಂದ ಮಹಿಳೆಯರ ಜೀವನ ಸ್ವಾವಲಂಬಿ ಬದುಕು ಖಚಿತವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಶೋಕ ಸಾಹುಕಾರ  ಕರಣಗಿ, ಉಪಾಧ್ಯಕ್ಷ ರಂಗಮ್ಮ ಹುಲಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶರಣಬಸಪ್ಪ, ತಹಸಿಲ್ದಾರ ಹಲಿಮಾ ಬೇಗಂ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗವಾರ, ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ   ಮೀನಾಕ್ಷಿ ಪಾಟೀಲ್, ವಡಗೇರಾ ಪಂಚಾಯತ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಗಿರಿ, ಸ್ತ್ರೀಶಕ್ತಿ  ಸಂಘಗಳ ಒಕ್ಕೂಟದ ತಾಲೂಕು ಕಾರ್ಯದರ್ಶಿ ಜ್ಯೋತಿ ಜೇವರ್ಗಿ, ಅಂಗನವಾಡಿ ಮೇಲ್ವಿಚಾರಕಿ ನಾಗಮ್ಮ, ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಪಂಚಾಯತ್ ಇಲಾಖೆ ಸಿಬ್ಬಂದಿಗಳು ಮತ್ತು ಪಟ್ಟಣದ  ಮುಖಂಡರು ಫಲಾನುಭವಿಗಳು ಉಪಸ್ಥಿತರಿದ್ದರು.

****

ರಾಜ್ಯದಲ್ಲಿ ಬಡವರ ಯೋಜನೆಗಳು ಜಾರಿಗೆ ಬರುತ್ತಿರುವುದರಿಂದ ಬಿಜೆಪಿಗೆ ಹೊಟ್ಟೆಕಿಚ್ಚು ಆರಂಭವಾಗಿದೆ. ಸರಕಾರ ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತರ ಕೇಂದ್ರ ಸರಕಾರ ಲೋಕಸಭಾ ಚುನಾವಣೆ ದೃಷ್ಟಿಯಿಂದ  ದರ ಇಳಿಕೆ ಮಾಡಿದೆ. ಕಾಂಗ್ರೆಸ್ ಸರಕಾರದ ಮೇಲೆ ಮಹಿಳೆಯರ ಶ್ರೀರಕ್ಷೆ ಇದ್ದು.ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದ  ನಾರಿಯರ ಶ್ರೀರಕ್ಷೆ ನಮ್ಮ ಸರಕಾರದ ಮೇಲೆ ಸದಾ ಇರಲಿದೆ ಎಂದರು.

ಚೆನ್ನಾರೆಡ್ಡಿ ತುನ್ನೂರು ಶಾಸಕ ಯಾದಗಿರಿ

About The Author