ಸುರಪುರ: ಚಿಕ್ಕನಹಳ್ಳಿ ಗ್ರಾಮದಲ್ಲಿ ವಾಂತಿಭೇದಿ ಸಿಇಒ ಭೇಟಿ ಪರಿಶೀಲನೆ 

Yadgiri ಸುರಪುರ : ಸುರಪುರ ತಾಲೂಕಿನ ಪೇಠ ಅಮ್ಮಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಣಾಧಿಕಾರಿ ಗರೀಮಾ ಪನ್ವಾರ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಗ್ರಾಮದಲ್ಲಿ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸೂಕ್ತ ಚಿಕಿತ್ಸೆ ನೀಡುತ್ತಿದ್ದು, ಇಂದಿನವರೆಗೆ ಮೂರು ಜನರು ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು ಯಾವುದೇ ಗಂಭೀರ ಸಮಸ್ಯೆಗಳು ಇರುವುದಿಲ್ಲ. ಗ್ರಾಮದಲ್ಲಿಯ ಕುಡಿಯುವ ನೀರಿನ ಮೂಲಗಳ ವಿವಿಧ ಮಾದರಿಗಳನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡದರು.ಈ ವೇಳೆ ಬಸವರಾಜ ಸಜ್ಜನ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *