ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ ಕೇಂದ್ರ ಸರ್ಕಾರ ಮಾತು ತಪ್ಪಿದೆ ಕುಮಾರ ಆರೋಪ

ವಡಗೇರಾ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕನ್ನು ಸಂಪೂರ್ಣವಾಗಿ ಈಡೇರಿಸಿದ್ದಾರೆ.ಬಡವರ ಪರ ಯೋಜನೆಗಳನ್ನು ಜಾರಿಗೆ ತರುವ ಕೆಲಸ ಮಾಡಿದ್ದಾರೆ. ಎಂದು ರಾಷ್ಟ್ರೀಯ ಕಾಂಗ್ರೆಸ ವಿದ್ಯಾರ್ಥಿ ಘಟಕದ ಯಾದಗಿರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ  ಎಸ್.ತೇಳಗೇರಿ ತುಮಕೂರು ಹೇಳಿದರು.

ಸಿದ್ದರಾಮಯ್ಯ ಸರಕಾರ ನುಡಿದಂತೆ ನಡೆದುಕೊಳ್ಳುವ ಸರಕಾರವಾಗಿದೆ ಎಂದರು.ರಾಜ್ಯದಲ್ಲಿನ ಬಡ ಮಹಿಳೆಯರ ಬಡತನದಿಂದ ಕಣ್ಣೀರು ಹಾಕುವದನ್ನು ಅರಿತ ಸರಕಾರ ಮಹಿಳೆಯರ ಕಣ್ಣೀರು ಒರೆಸುವ ಕಾರ್ಯ ಮಾಡುತ್ತಿದೆ.ಗೃಹ ಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕಷ್ಟ ಅರಿತು ಅನೇಕ ಜನಪರ ಯೋಜನೆ ಜಾರಿಗೆ ತಂದಿದೆ.ಈಗಾಗಲೇ ಮಹಿಳೆಯರ ಉಚಿತ ಬಸ್ ನಲ್ಲಿ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಇದರಿಂದ ಬಸ್ ನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆ ಮೂಲಕ ಬಡವರ ಹೊಟ್ಟೆ ತುಂಬಿಸುವ ಕಾರ್ಯ ಮಾಡುತ್ತಿದೆ.ಅದೆ ರೀತಿ ಬಡವರ ಮನೆ ಬೆಳಗಿಸಲು ಗೃಹ ಜ್ಯೋತಿ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ಅದರಲ್ಲೂ ವಿಶೇಷವಾಗಿ ನಮ್ಮ ಕರ್ನಾಟಕ
ರಾಜ್ಯ ಸರಕಾರ ದೇಶದಲ್ಲಿಯೇ ಅತಿದೊಡ್ಡ ಯೋಜನೆಗಳನ್ನು ಜಾರಿಗೆ ತಂದಿದೆ.

ಕೇಂದ್ರ ಸರಕಾರ ಸಿಲಿಂಡರ್ ದರ ಕೇವಲ ₹200  ಇಳಿಕೆ ಮಾಡಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ.ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ₹15 ಲಕ್ಷ ದುಡ್ಡು ಹಾಕುವುದಾಗಿ ಹೇಳಿದ್ದರು ಈಡೇರಿಸಿಲ್ಲ. ಕೇಂದ್ರ ಸರ್ಕಾರ ಬರಿ ಸುಳ್ಳುಗಳನ್ನು ಹೇಳುತ್ತಾ ಕಾಲ ಕಳೆಯುತ್ತಿದೆ. ಜನರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರಕ್ಕೆ ಯುವಕರು ಸಾರ್ವಜನಿಕರು ತಕ್ಕ ಪಾಠ ಕಲಿಸುತ್ತಾರೆ ಹೇಳಿದರು.

About The Author