ಜಿಲ್ಲೆಗೆ ಬಿಎಸ್ಸಿ ನರ್ಸಿಂಗ್ ಕಾಲೇಜ್ ಸ್ಥಾಪನೆಗೆ‌ ಭೀಮರಾಯ ಜಂಗಳಿ ಆಗ್ರಹ

ಯಾದಗಿರಿ : ಯಾದಗಿರಿ ಜಿಲ್ಲೆಯಾಗಿ ಹಲವು ವರ್ಷ ಕಳೆದರೂ ಯಾದಗಿರಿ ಶಿಕ್ಷಣದಲ್ಲಿ ಹಿಂದುಳಿದ ಜಿಲ್ಲೆಯಾಗಿಯೆ ಉಳಿದಿದೆ.ಆದ್ದರಿಂದ ಜಿಲ್ಲೆಯಲ್ಲಿ ಹೊಸ ಬಿಎಸ್ಸಿ ಸರ್ಕಾರಿ ನರ್ಸಿಂಗ್ ಕಾಲೇಜ್ ಸ್ಥಾಪಿಸುವಂತೆ  ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಭೀಮರಾಯ ಜಂಗಳಿ ಆಗ್ರಹಿಸಿದ್ದಾರೆ. ಯಾದಗಿರಿ ಜಿಲ್ಲೆಯ ವಿದ್ಯಾರ್ಥಿಗಳು ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡಲು ಕಲಬುರ್ಗಿ ಜಿಲ್ಲೆ ಸೇರಿದಂತೆ ಇತರ ಪಕ್ಕದ ಜಿಲ್ಲೆಗಳನ್ನು ಆಶ್ರಯಿಸಬೇಕಾಗಿದೆ. ಜಿಲ್ಲೆಯಾಗಿ ಹಲವು ವರ್ಷಗಳು ಕಳೆದಿವೆ.ಆದರೆ ಇದುವರೆಗೂ ಬಿಎಸ್ಸಿ ನರ್ಸಿಂಗ್ ಕಾಲೇಜು ಇಲ್ಲ.ಆದ್ದರಿಂದ ಸರಕಾರ ಯಾದಗಿರಿ ಜಿಲ್ಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲೆಗೆ ಬಿಎಸ್ಸಿ ನರ್ಸಿಂಗ್ ಸರಕಾರಿ ಕಾಲೇಜು ಒದಗಿಸಿ ಕೊಟ್ಟರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಸರ್ಕಾರಕ್ಕೆ ಆಗ್ರಹಿಸಿದರು.

About The Author