ಶಹಾಪುರ : ಯಾದಗಿರಿ ಕಲಬುರ್ಗಿ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ತನ್ನದೇ ಆದ ಚಾಪು ಮೂಡಿಸಿರುವ 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪ್ರಚಾರದ ಗೆಲುವಿಗೆ ಕಾರಣೀಭೂತರಾದ ಕಾಂಗ್ರೆಸ್ ಹಿರಿಯ ಮುಖಂಡರಾದ ಶರಣಪ್ಪ ಸಲಾದಪುರ ಅವರಿಗೆ ಪ್ರಬಲ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಯುವ ಮುಖಂಡರಾದ ಬಸವರಾಜ ಶಹಪುರ ಮುಖ್ಯಮಂತ್ರಿಗಳಿಗೆ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ಹಾಗೂ ಎಐಸಿಸಿ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.
ಯಾದಗಿರಿ ಶಹಾಪುರ ಜೇವರ್ಗಿ ಗುರುಮಿಟ್ಕಲ್ ಸುರಪುರ ಕ್ಷೇತ್ರಗಳಲ್ಲಿ ಸಂಚರಿಸಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣೀಭೂತರಾದ ಶರಣಪ್ಪ ಸಲಾದಪುರ ರವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಗುರುತಿಸಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಹೇಳಿದರು.
ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ನಿಖಿಲ್ ಶಂಕರ್ ರವರಿಗೆ ನಿಗಮ ಮಂಡಳಿ ಸ್ಥಾನ ನೀಡಬೇಕೆಂದು ಈ ಸಂದರ್ಭದಲ್ಲಿ ಹೇಳಿದರು. ಮೈಸೂರಿನ ವರುಣ ಕ್ಷೇತ್ರ ಸೇರಿದಂತೆ ರಾಜ್ಯದ ಹಲವಾರು ಕ್ಷೇತ್ರದಲ್ಲಿ ಅಭ್ಯರ್ಥಿಗಳ ಗೆಲುವಿಗೆ ಕಾಂಗ್ರೆಸ್ ಪರ ಪ್ರಚಾರ ಮಾಡಿ ಗೆಲುವಿಗೆ ಕಾರಣೀಭೂತರಾದ ನಿಗಮ ಮಂಡಳಿ ನಿಖಿಲ್ ಶಂಕರ್ ರವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.
Post Views: 286