Yadgiri ವಡಗೇರಾ. ತಾಲೂಕಿನ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಡುತ್ತಿದ್ದು ಇದರಿಂದ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ವಡಗೇರಾ ತಾಲೂಕು ಅಧ್ಯಕ್ಷ ಮಲ್ಲಣ್ಣ ನೀಲಹಳ್ಳಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ನಿಯಮದ ಪ್ರಕಾರ ದಿನಕ್ಕೆ ರೈತರಿಗೆ 7 ತಾಸು ವಿದ್ಯುತ್ ನೀಡಬೇಕು.

ಅದನ್ನು ಕೂಡ ಸರಿಯಾಗಿ ನೀಡುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಕನಿಷ್ಠ ರೈತರ ಪಂಪ್ಸೆಟ್ ಗಳಿಗೆ 12 ಗಂಟೆ ವಿದ್ಯುತ್ ನೀಡುವಂತೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಆದರೆ ಅಧಿಕಾರಿಗಳು ಜನಪ್ರತಿನಿಧಿಗಳು ತೀವ್ರ ನಿರ್ಲಕ್ಷ ವಯಸಿದ್ದು, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ರೈತರು ಸಾಲ ಮಾಡಿ ಭತ್ತ ಹಾಗೂ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಾರೆ. ಆದರೆ ಸರಿಯಾಗಿ ವಿದ್ಯುತ್ ನೀಡದ ಕಾರಣ ಬೆಳೆಗಳು ಒಣಗುತ್ತಿವೆ. ವಿದ್ಯುತ್ ಅವಲಂಬನೆ ಮೇಲೆ ಸಾಕಷ್ಟು ರೈತರು ಜೀವನ ನಡೆಸುತ್ತಿದ್ದಾರೆ.

ಇಂಧನ ಇಲಾಖೆ ಮಾತ್ರ ರೈತರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ರೈತರು ಮಾತ್ರ ರೋಷಿವೊಗಿದ್ದಾರೆ. ಕೂಡಲೆ ಸಂಬಂಧ ಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಮಧ್ಯಪ್ರವೇಶಿಸಿ 12 ಗಂ. ವಿದ್ಯುತ್ ನೀಡಬೇಕು. ಇಲ್ಲವಾದಲ್ಲಿ ವಡಗೇರಾ ಪಟ್ಟಣದ ವಿದ್ಯುತ್ ಕಚೇರಿ ಮುಂದೆ ಹೋರಾಟ ಮಾಡುವುದಾಗಿ ಎಚ್ಚರಿಸಿದರು.