ಸಚಿವ ದರ್ಶನಾಪುರರಿಂದ ಉದ್ಘಾಟನೆ : ಉತ್ತಮ ಶಿಕ್ಷಕರಿಗೆ ಪ್ರಶಸ್ತಿ : ೯ರಂದು ತಾಲೂಕಾ ಖಾಸಗಿ ಶಾಲೆಗಳ ಒಕ್ಕೂಟದಿಂದ ೨ನೇ ಸಮ್ಮೇಳನ

ಶಹಾಪುರ: ಬರುವ ದಿನಾಂಕ ೯-೯-೨೦೨೩ ಶನಿವಾರದಂದು ಬೆಳಗ್ಗೆ ೯:೩೦ಕ್ಕೆ ಭಿ.ಗುಡಿ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ತಾಲೂಕಾ ಖಾಸಗಿ ಶಾಲೆಗಳ ಒಕ್ಕೂಟದಿಂದ ೨ನೇ ಸಮ್ಮೇಳನ ಹಾಗೂ ಖಾಸಗಿ ಶಾಲೆಯಲ್ಲಿ ಸೇವೆ ಸಲ್ಲಿಸಿರುವ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಶರಣಬಸಪ್ಪಗೌಡ ದರ್ಶನಾಪುರ ಸಣ್ಣ ಕೈಗಾರಿಕೆ ಸಾರ್ವಜನಿಕ ಉದ್ಯಮ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸುವರು, ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಹೆಚ್.ಟಿ.ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಶಿಬಾಜಿಲಿಯನ್ ಸೇರಿದಂತೆ ಖಾಸಗಿ ಶಾಲೆಯ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ, ಅಂದಿನ ಕಾರ್ಯಕ್ರಮಕ್ಕೆ ತಾಲೂಕಿನ ಸಮಸ್ತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು, ಪ್ರಧಾನ ಅಧ್ಯಾಪಕರು, ಶಿಕ್ಷಕ, ಶಿಕ್ಷಕಿಯರು, ಸಿಬ್ಬಂಧಿ ವರ್ಗದವರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಬೇಕೆಂದು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಚೆನ್ನಬಸ್ಸು.ಆರ್.ವನದುರ್ಗ, ಮತ್ತು ಒಕ್ಕೂಟದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

About The Author