
“ಕೊಪ್ಪಳ ಜಿಲ್ಲಾ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷೆ ಗಂಗಮ್ಮ ಕೊಪ್ಪಳ”
*****
ಬೆಂಗಳೂರು : ಕುರಿಗಾರರ ಸಮಸ್ಯೆಗಳ ಬಗ್ಗೆ ಹಲವಾರು ಬಾರಿ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆದು ಕುರಿಗಾರರ ಸಮಸ್ಯೆಗಳನ್ನು ಈಡೇರಿಸಿ ಕುರಿಗಾಹಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಅಯ್ಯಪ್ಪಗೌಡ ಗಬ್ಬೂರು ರವರಿಗೆ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲು ಕೊಪ್ಪಳ ಜಿಲ್ಲಾ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷೆ ಗಂಗಮ್ಮ ಕೊಪ್ಪಳ ಮನವಿ ಮಾಡಿದ್ದಾರೆ.
ಯುವ ಹೋರಾಟಗಾರರಾದ ಅಯ್ಯಪ್ಪಗೌಡ ಗಬ್ಬೂರು ಕಾಂಗ್ರೆಸ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಮತ್ತು ಸಂಘಟನೆಗಾರನಾಗಿ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಗಳಾಗಿ ತನ್ಕ ಕರ್ತವ್ಯ ನಿರ್ವಹಿಸಿದ್ದಾರೆ.
ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ರಾಜ್ಯದ ಕುರಿಗಾಹಿಗಳು ಕುರಿಗಾರರಿಗೆ ಅನುಕೂಲವಾದ ತಾಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸಕ್ರೀಯವಾಗಿ ಓಡಾಡಿ,ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದಾರೆ.ಲೋಕಸಭಾ ಚುನಾವಣೆ ದೃಷ್ಟಿಯಿಂದ ಯುವಕರಿಗೆ ಸ್ಥಾನ ಕೊಟ್ಟರೆ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ಹೋರಾಟಗಾರ್ತಿ ಗಂಗಮ್ಮ ಕೊಪ್ಪಳ ರವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.