ಪೋಷಣ ಅಭಿಯಾನ ಕಾರ್ಯಕ್ರಮ ಮಕ್ಕಳ ದೈಹಿಕ ಬೆಳವಣಿಗೆ ಕ್ರಿಯಾಶೀಲತೆಗೆ ಪೌಷ್ಟಿಕ ಆಹಾರ ಅಗತ್ಯ : ಕವಿತಾ ಕುಲಕರ್ಣಿ

” ಶಹಾಪುರತಾಲೂಕಿನ ದೋರನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ ನಡೆಯಿತು”

ಶಹಾಪುರ: ಮಕ್ಕಳ ದೈಹಿಕ ಬೆಳವಣಿಗೆ ಹಾಗೂ ಕ್ರಿಯಾಶೀಲತೆಗಳಿಗೆ ಪೌಷ್ಟಿಕ ಆಹಾರಗಳು ಅಗತ್ಯವಿದ್ದು, ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಪೌಷ್ಟಿಕ ಆಹಾರಗಳನ್ನು ನೀಡುವುದರೊಂದಿಗೆ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿಯಿಂದ ಇಲಾಖೆ ಕಾರ್ಯನಿರ್ವಹಿಸುತ್ತಿದೆ.ಸರ್ಕಾರ ಯೋಜನೆಗಳನ್ನು ಜಾರಿಗೆ ತಂದಾಗ ಅವುಗಳನ್ನು ಜನರಿಗೆ ಸರಿಯಾಗಿ ಮುಟ್ಟಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅಂಗನವಾಡಿ ಮೇಲ್ವಿಚಾರಕಿಕವಿತಾಕುಲಕರ್ಣಿ ಹೇಳಿದರು.

ತಾಲೂಕಿನ ದೋರನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೋಷಣ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ಹದಿಹರೆಯದ ಯುವತಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು.ಅವರಿಗೆ ಪೌಷ್ಟಿಕ ಆಹಾರ ಒದಗಿಸುವುದು,ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಹಾಗೂ ಅಪೌಷ್ಟಿಕ ಹೋಗಲಾಡಿಸುವುದು ಪೋಷಣ ಅಭಿಯಾನದ ಉದ್ದೇಶವಾಗಿದೆ.ಗರ್ಭಿಣಿಯರು ಅಪೌಷ್ಟಿಕದಿಂದ ಬಳಲುತ್ತಿದ್ದರೆ ಹೆರಿಗೆ ಸಮಯದಲ್ಲಿ ತೀವ್ರತೊಂದರೆ ಆಗಲಿದೆ.ಅಲ್ಲದೆ ಕಡಿಮೆ ತೂಕದ ಮಗು ಜನಿಸುವ ಸಾಧ್ಯತೆ ಇದೆ.ಆದ್ದರಿಂದ ಸೊಪ್ಪು, ತರಕಾರಿ, ಮೊಳಕೆಕಾಳು, ಬಾಳೆಹಣ್ಣು, ಮೊಟ್ಟೆ ಸೇರಿ ಇತರ ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಿದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಹಾಯಕ ಶಿಶು ಅಭಿವೃದ್ಧಿ ಯೋಜನಾಕಾರಿ ಯೋಗ್ಯಾತ ಅವರು, ಗ್ರಾಮೀಣ ಭಾಗದಲ್ಲಿ ತಿಳಿವಳಿಕೆ ಕೊರತೆಯಿಂದ ಗರ್ಭಿಣಿಯರಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗುತ್ತಿದೆ. ಇದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರದಲ್ಲಿ ನಿತ್ಯ ಪೌಷ್ಟಿಕ ಆಹಾರ ನೀಡಲಾಗುತ್ತಿದೆ.ಇದರ ಜತೆಗೆ ಮಕ್ಕಳ ಆರೋಗ್ಯದ ಕಡೆಗೂ ಸಹ ನಮ್ಮ ಇಲಾಖೆ ಕಾಳಜಿ ವಹಿಸುತ್ತಿದೆ.ಬಾಣಂತಿಯರು ನಿತ್ಯ ಪೌಷ್ಟಿಕ ಆಹಾರ ಸೇವನೆ ಮಾಡುವುದರಿಂದ ಜನಿಸುವ ಮಗು ಆರೋಗ್ಯವಾಗಿರುತ್ತದೆ.ಕಾಲ ಕಾಲಕ್ಕೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಆರೋಗ್ಯತಪಾಸಣೆ ಮಾಡಿಸಿಕೊಳ್ಳಬೇಕು.ಅಲ್ಲದೆ ಮಾತ್ರೆ, ಔಷಧಿ ತೆಗೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಅಂಗನವಾಡಿಕಾರ್ಯಕರ್ತೆ ಮರಿಲಿಂಗಮ್ಮ ಮಾತನಾಡಿ ಈ ಪೋಷಣ ಅಭಿಯಾನದ ಉದ್ದೇಶ ಗರ್ಭಿಣಿತಾಯಂದಿರಲ್ಲಿ ರಕ್ತಹೀನತೆ ಅಪೌಷ್ಟಿಕತೆ ಕೊರತೆ ಕಾಣಬಾರದು ಎಂಬ ಹಿತದೃಷ್ಟಿಯಿಂದ ಇಂತಹ ಪೋಷಣ ಅಭಿಯಾನ ಕಾರ್ಯಕ್ರಮಗಳನ್ನು ಮಾಡಿ ಗರ್ಭಿಣಿ ಸ್ತ್ರೀಯರಲ್ಲಿ ಯಾವಯಾವ ಸಮಸ್ಯೆಗಳು ಉಂಟಾಗುತ್ತವೆ.ಗರ್ಭಿಣಿಯರು ಯಾವ ಆಹಾರವನ್ನು ಸೇವಿಸಬೇಕು. ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಬಗ್ಗೆ ಅಂಗನವಾಡಿ ಕೇಂದ್ರಗಳ ಮೂಲಕ ಹೆಚ್ಚು ಕಾಳಜಿ ವಹಿಸಲಾಗುತ್ತಿದೆ ಎಂದರು.

ಈ ಕಾರ್ಯಕ್ರಮದಲ್ಲಿಅಂಬೇಡ್ಕರ್ ನಗರದ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಕಮಲಾಕ್ಷಿ, ಜ್ಯೋತಿ, ಅಂಗನವಾಡಿ ಕಾರ್ಯಕರ್ತೆಯರಾದ ಯಮನಮ್ಮ, ಚಂದಮ್ಮ, ಲಕ್ಷ್ಮಿ, ಪರ್ವಿನ್ ಬೇಗಮ್, ನಾಜಿಯಾಬೇಗಂ, ಲಕ್ಷ್ಮಿಎಚ್, ಸುಶೀಲ, ಶೈನಾಜ್ ಬೇಗಂ ಹಾಗೂ ಮಕ್ಕಳ ತಾಯಿಯಂದಿರಾದ ಬಸಮ್ಮಕಸನ್, ಮರಿಲಿಂಗಮ್ಮ ಗೌಡುರ್ ಸೇರಿದಂತೆ ಗರ್ಭಿಣಿ ಬಾಣಂತಿಯರು ಇದ್ದರು.

About The Author