ಬಿ.ಎಮ್.ಪಾಟೀಲರಿಗೆ ಡಿ.ದೇವರಾಜ ಅರಸು ರಾಜ್ಯ ಪ್ರಶಸ್ತಿ ಪ್ರಕಟ ಕರೆಗಾರ ಹರ್ಷ

ರಾಯಚೂರು : ಹಿಂದುಳಿದ ವರ್ಗಗಳ ನಾಯಕ ಕೆಪಿಸಿಸಿ ರಾಜ್ಯ ವಕ್ತಾರರು ಸಂಯೋಜಕರು, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ಬಿ ಎಂ ಪಾಟೀಲರಿಗೆ ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ ಧಾರ್ಮಿಕ  ಸಾಂಸ್ಕೃತಿಕ ಸಂಘ ರಾಯಚೂರು ಇವರು ಕೊಡಮಾಡುವ ರಾಜ್ಯ ಪ್ರಶಸ್ತಿಯಾದ ಡಿ.ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಯಾಗಿದ್ದು ಸಂತಸ ತಂದಿದೆ ಎಂದು ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ಕಲ್ಯಾಣ ಕರ್ನಾಟಕದ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ ಕರೆಗಾರ ಸಂತಸ ವ್ಯಕ್ತಪಡಿಸಿದ್ದಾರೆ.

ಸೆಪ್ಟಂಬರ್ 23ರಂದು ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ  ಬೆ. 10:30 ಕ್ಕೆ ನಡೆಯುವ ಈ ಕಾರ್ಯಕ್ರಮದಲ್ಲಿ ಎಂ.ಬಿ.ಪಾಟೀಲ್ ಅವರಿಗೆ ಪ್ರಶಸ್ತಿ ವಿತರಿಸಲಾಗುವುದು ಎಂದರು.

ಬಿ ಎಂ ಪಾಟೀಲರು ಹಿಂದುಳಿದ ವರ್ಗದ  ನಾಯಕರಾಗಿದ್ದು, ರಾಜ್ಯಾದ್ಯಂತ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘವನ್ನು ತಾಲೂಕು ಮಟ್ಟದಿಂದಿಡಿದು ಜಿಲ್ಲಾ ಮಟ್ಟದವರೆಗೆ ಸಂಘಟಿಸಿದ್ದಾರೆ. ಸಮಾಜದ ಏಳಿಗೆಗಾಗಿ ಇತರ ಸಮುದಾಯಗಳನ್ನು ಒಟ್ಟಿಗೆ ಸೇರಿಸಿಕೊಂಡು ಶೋಷಿತ ವರ್ಗದವರ ಏಳಿಗೆಗಾಗಿ ಸದಾ ಶ್ರಮಿಸುತ್ತಿರುವ ಒಬ್ಬ ಹಿಂದುಳಿದ ನಾಯಕನಿಗೆ ದೇವರಾಜ ಅರಸು ಪ್ರಶಸ್ತಿ ತಂದಿರುವುದು ಸಂತೋಷದಾಯಕದ ವಿಚಾರವಾಗಿದೆ ಎಂದು ಹೇಳಿದರು. ನಾಳಿನ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗದ ಹಾಗೂ ಕುರುಬ ಸಮಾಜದ ಹಲವಾರು ಗಣ್ಯವ್ಯಕ್ತಿಗಳು ಪಾಲ್ಗೊಳ್ಳುವರು ಎಂದು ತಿಳಿಸಿದರು.

About The Author